ರಾಯಚೂರು:- ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಶವ ಪತ್ತೆಯಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಅರಗಿನಮರ ಕ್ಯಾಂಪ್‌ನಲ್ಲಿ ಜರುಗಿದೆ.
ನೇಣಿಗೆ ಶರಣಾದ ಗೃಹಿಣಿಯನ್ನು ಲಿಪಿ ಎಂದು ಗುರುತಿಸಲಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್ ಆಗಿದ್ದ ಲಿಪಿ, ಮಂಜುನಾಥನನ್ನು ಮೂರು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದಳು. ಪತಿ ನಿರುದ್ಯೋಗಿಯಾಗಿದ್ದ. ಮದುವೆಯಾದ ಮೇಲೆಯೂ ಕೆಲಸಕ್ಕೆ ಹೋಗುತ್ತಿರಲಿಲ್ಲ. ಮದುವೆಯಾದ ಆರು ತಿಂಗಳಿಂದಲೇ ನಿತ್ಯ ಮದ್ಯಪಾನ ಮಾಡಿ ಪತ್ನಿಗೆ ವರದಕ್ಷಿಣೆ ಕಿರಕುಳ ನೀಡುತ್ತಿದ್ದ. ಅದೇ ವಿಚಾರಕ್ಕಾಗಿ ನನ್ನ ಮಗಳನ್ನು ಕೊಲೆ ಮಾಡಿದ್ದಾರೆ ಎಂದು ಮೃತಳ ಪೋಷಕರು ಆರೋಪಿಸಿದ್ದಾರೆ.
ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಹಿನ್ನೆಲೆ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಪತಿ ಮಂಜುನಾಥ ವಿರುದ್ಧ ಕೇಸ್ ದಾಖಲಾಗಿದೆ.