ಮಂಡ್ಯ: ಲಾರಿ ಮತ್ತು ಕಾರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಮಂಡ್ಯದ ಮಳವಳ್ಳಿಯ ಚೆನ್ನೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಚಿತ್ರದುರ್ಗದ ಮೂಲದ ಆಕಾಶ್, ಶಶಂಕ್ ಹಾಗೂ ಆದರ್ಶ್ ಮೃತ ಯುವಕರಾಗಿದ್ದು, ಬೆಂಗಳೂರಿನ ಬಿಐಟಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
Advertisement
ವಿದ್ಯಾರ್ಥಿಗಳು ಬೆಂಗಳೂರಿನಿಂದ ಮೈಸೂರು ಜಿಲ್ಲೆಯ ತಲಕಾಡು ಪ್ರವಾಸಕ್ಕೆ ತೆರಳುತ್ತಿದ್ದರು. ಈ ವೇಳೆ ಕೊಳ್ಳೆಗಾಲ ಮತ್ತು ಮದ್ದೂರಿಗೆ ಸಂಪರ್ಕ ಕಲ್ಪಿಸುವ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಸದ್ಯ ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹಗಳ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಮಳವಳ್ಳಿ ಪೊಲೀಸರ ಭೇಟಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.