ಚಿಕ್ಕಮಗಳೂರು : ಮತ್ತೊಂದು ಭೀಕರ ಅಪಘಾತದಲ್ಲಿ ಪ್ರವಾಸಕ್ಕೆ ಬಂದಿದ್ದ ಶಾಲಾ ವ್ಯಾನ್ ಪಲ್ಟಿಯಾಗಿ 5 ಮಕ್ಕಳಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರಿನ ಕೈಮರ ಚೆಕ್ ಪೋಸ್ಟ್‌ನ ಬಳಿ ಸಂಭವಿಸಿದೆ. ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆ ಮೈಸೂರಿನ ಖಾಸಗಿ ಶಾಲೆಯೊಂದರ ಮಕ್ಕಳು ಬಂದಿದ್ದರು.
Advertisement
ವಿದ್ಯಾರ್ಥಿಗಳು ಸರ್ಕಾರಿ ಬಸ್‍ನಲ್ಲಿ ಚಿಕ್ಕಮಗಳೂರಿಗೆ ಬಂದು, ಅಲ್ಲಿಂದ ಮುಳ್ಳಯ್ಯನಗಿರಿಗೆ ಟ್ರ್ಯಾಕ್ಸ್ ಮಾಡಿಸಿಕೊಂಡು ಹೊರಟಿದ್ದರು. ಈ ವೇಳೆ, ಕೈಮರದ ಬಳಿ ಟ್ರ್ಯಾಕ್ಸ್‌ನ ಟೈರ್ ಸ್ಫೋಟಗೊಂಡಿದೆ. ಪರಿಣಾಮ 12 ಮಕ್ಕಳಲ್ಲಿ 5 ಮಕ್ಕಳು ಗಾಯಗೊಂಡಿದ್ದಾರೆ. ಬಳಿಕ ಮಕ್ಕಳನ್ನ ಬೇರೆ ವಾಹನದಲ್ಲಿ ಕರೆದುಕೊಂಡು ಹೋಗಲಾಗಿದೆ. ಘಟನೆ ಸಂಬಂಧ ಚಿಕ್ಕಮಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.