ಬೆಂಗಳೂರು: ಕುಡಿದ ಮತ್ತಿನಲ್ಲಿ ಮರ್ಮಾಂಗವನ್ನು ಸಿಗರೇಟ್ ನಿಂದ ಸುಟ್ಟು ಭೀಕರ ಕೊಲೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲ್ಲೂಕಿನ ಭೋವಿತಿಮ್ಮನಪಾಳ್ಯದಲ್ಲಿ ನಡೆದಿದೆ. ಪ್ರದೀಪ್ (41) ಕೊಲೆಯಾದ ವ್ಯಕ್ತಿಯಾಗಿದ್ದು, ಚೇತನ್ (30) ಕೊಲೆ ಮಾಡಿರುವ ಆರೋಪಿ ಆಗಿದ್ದಾನೆ. ಡಿ.19 ರಂದು ಈ ಘಟನೆ ನಡೆದಿದ್ದು, ಮೃತ ಪ್ರದೀಪ್ ಹೆಂಡತಿಯೊಂದಿಗೆ ಜಗಳವಾಡಿಕೊಂಡಿದ್ದ,
ಇದರಿಂದ ಇಬ್ಬರು ಬೇರೆಯಾಗಿದ್ದರು. ಆಕೆಯನ್ನ ಆರೋಪಿ ಚೇತನ್ ತನ್ನ ಮನೆಯಲ್ಲಿ ಇರಿಸಿಕೊಂಡಿದ್ದ. ಇದರಿಂದ ಕುಡಿದ ಮತ್ತಿನಲ್ಲಿ ಬಂದ ಪ್ರದೀಪ್ ಅವನ ಮನೆಯಲ್ಲಿ ಮೂತ್ರ ವಿಸರ್ಜನೆ ಮಾಡುತ್ತಿದ್ದ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದೆ.
ಪ್ರದೀಪ್ ತಲೆಯನ್ನು ಗೋಡೆಗೆ ಗುದ್ದಿಸಿ, ಸಿಗರೇಟ್ನಿಂದ ಮರ್ಮಾಂಗವನ್ನು ಸುಟ್ಟು ಹತ್ಯೆ ಮಾಡಿದ್ದಾನೆ. ಘಟನೆ ಸಂಬಂಧ ಆರೋಪಿ ಚೇತನ್ನನ್ನು ಪೊಲೀಸರು ಬಂಧಿಸಿದ್ದು, ಸಲಿಂಗಕಾಮಕ್ಕೆ ಸ್ನೇಹಿತನನ್ನು ಹತ್ಯೆ ಮಾಡಿರಬಹುದು ಎಂಬ ಶಂಕೆಯಲ್ಲಿ ಶಂಕಿಸಿದ್ದು, ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡು ಮಾದನಾಯನಹಳ್ಳಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.