ಬೆಳಗಾವಿ: ರಾಜ್ಯದಲ್ಲಿ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಕುರಿತು ಚರ್ಚೆ ನಡೆಯುತ್ತಿರುವ ವೇಳೆಯೇ ಇದೀಗ ಮತ್ತೊಬ್ಬ ಬಾಣಂತಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. 20 ವರ್ಷದ ವೈಶಾಲಿ ಕೊಟಬಾಗಿ ಎನ್ನುವ ಬಾಣಂತಿ ಸಾವಿಗೀಡಾಗಿದ್ದಾಳೆ ಎಂದು ತಿಳಿದು ಬಂದಿದೆ.
Advertisement
ಹೆರಿಗೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಸಿಸೇರಿಯನ್ ಮೂಲಕ ಹೆಣ್ಣು ಮಗುವಿಗೆ ಜನ್ಮ ನೀಡಿದ ವೈಶಾಲಿಗೆ ಬೆಳಗ್ಗೆ ಎದೆನೋವು ಕಾಣಿಸಿಕೊಂಡಿತ್ತು. ತಕ್ಷಣ ಬಾಣಂತಿ ವೈಶಾಲಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಿತ್ತಾದರೂ, ಚಿಕಿತ್ಸೆ ಫಲಿಸದೇ ಮರಣ ಹೊಂದಿದ್ದಾರೆ ಎಂದು ಆಸ್ಪತ್ರೆ ಸಿಬ್ಬಂದಿ ಹೇಳಿದ್ದಾರೆ.
ಆದರೆ ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ ಎಂದು ವೈಶಾಲಿ ಪತಿ ಈರಣ್ಣ ಆರೋಪಿಸಿದ್ದಾರೆ. ಎರಡು ದಿನಗಳ ಹಿಂದೆಯಷ್ಟೇ ಪತಿಯ ಜೊತೆ ವೈಶಾಲಿ ಸಂಭ್ರಮದಿಂದ ವಿವಾಹ ವಾರ್ಷಿಕೋತ್ಸವ ಆಚರಿಸಿಕೊಂಡಿದ್ದರು.