ಸದ್ವಿಚಾರ, ನಾಯಕತ್ವದ ಗುಣ ಬೆಳೆಸಿಕೊಳ್ಳಿ: ಸಚಿವ ಎಸ್.ಎಸ್ ಪಾಟೀಲ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ದೇಶದ ಅಭಿವೃದ್ಧಿಗೆ ಪೂರಕವಾದ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸದಲ್ಲಿ ಶಾಲೆ, ಕಾಲೇಜು ಹಾಗೂ ಶಿಕ್ಷಕರ ಕಾರ್ಯ ಶ್ಲಾಘನೀಯ. ವಿದ್ಯಾರ್ಥಿಗಳು ಇಂದಿನ ಸಮಾಜದ ವಾಸ್ತವವನ್ನು ಅರಿತುಕೊಂಡು ಶಿಕ್ಷಕರಿಂದ ವಿದ್ಯೆಯನ್ನು ಪಡೆಯುವುದರ ಜೊತೆಗೆ ಶರಣರ ಆದರ್ಶಗಳನ್ನು ಪಾಲಿಸುತ್ತಾ ಸಾತ್ವಿಕ ನಡೆ-ನುಡಿಗಳ ಮೌಲಿಕ ವ್ಯಕ್ತಿತ್ವ ಹೊಂದಬೇಕೆAದು ಸಹಕಾರ ಮತ್ತು ಅರಣ್ಯ ಖಾತೆ ಮಾಜಿ ಸಚಿವ ಎಸ್.ಎಸ್ ಪಾಟೀಲ ಕರೆ ನೀಡಿದರು.

Advertisement

ಸ್ಥಳೀಯ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಬಸವೇಶ್ವರ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಮಹಾವಿದ್ಯಾಲಯದಲ್ಲಿ ಬಿಎ/ಬಿಕಾಂ/ಬಿಎಸ್ಸಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಕ ವೃತ್ತಿ ಪವಿತ್ರವಾದುದು. ವಿದ್ಯಾರ್ಥಿಗಳು ಅವರ ಮಾರ್ಗದರ್ಶನದಲ್ಲಿ ಸಕಾರಾತ್ಮಕ ನಿಲುವು, ಸದ್ವಿಚಾರ ಹಾಗೂ ನಾಯಕತ್ವದ ಗುಣ ಬೆಳೆಸಿಕೊಳ್ಳಬೇಕೆಂದು ಕಿವಿ ಮಾತು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಗದ್ಗುರು ತೋಂಟದಾರ್ಯ ವಿದ್ಯಾಪೀಠದ ಕಾಯದರ್ಶಿಗಳಾದ ಎಸ್.ಎಸ್. ಪಟ್ಟಣಶೆಟ್ಟರ ಮಾತನಾಡಿ, ಜೀವನದಲ್ಲಿ ಕಷ್ಟಗಳನ್ನು ತಡೆದುಕೊಂಡು ನಿರಂತರ ಪರಿಶ್ರಮದಿಂದ ಅಧ್ಯಯನ ಮಾಡಿ ಉತ್ತಮ ಸಾಧಕರಾಗಬೇಕು. ವಿದ್ಯಾರ್ಥಿಗಳು ದುಶ್ಚಟ ಮತ್ತು ಮೂಢನಂಬಿಕೆಗಳಿAದ ದೂರವಿರಬೇಕು. ವಿದ್ಯಾರ್ಜನೆ ಸಮಯದಲ್ಲಿ ಇಂದು ವಿದ್ಯಾರ್ಥಿಗಳು ಮೊಬೈಲನ್ನು ವಿದ್ಯೆಗೆ ಪೂರಕವಾಗುವಂತೆ ಸಕಾರಾತ್ಮಕವಾಗಿ ಬಳಸಬೇಕೆಂದು ಹೇಳಿದರು.

ವೇದಿಕೆಯ ಮೇಲೆ ಅತಿಥಿಗಳಾಗಿ ಸ್ಥಾನಿಕ ಆಡಳಿತ ಮಂಡಳಿ ಸದಸ್ಯರಾದ ಅಮರೇಶ ಅಂಗಡಿ, ಶೇಖಣ್ಣ ಕಳಸಾಪೂರಶೆಟ್ಟರ, ಈಶಣ್ಣ ಮುನವಳ್ಳಿ ಹಾಗೂ ಸಿದ್ಧಲಿಂಗಯ್ಯ ಹಿರೇಮಠ ಉಪಸ್ಥಿತರಿದ್ದರು.

ಪದ್ಮಾವತಿ ಮುಕ್ಕಣ್ಣವರ ಸಂಗಡಿಗರು ಪ್ರಾರ್ಥಿಸಿದರು. ಪ್ರಾ ಎಂ.ಎA. ಬುರಡಿ ಸ್ವಾಗತಿಸಿ ಪರಿಚಯಿಸಿದರು. ಅತೀ ಹೆಚ್ಚು ಅಂಕಗಳಿಸಿದ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರೀತಿ ಹಿರೇಮಠ ಹಾಗೂ ಕುಮಾರ ಪ್ರಶಾಂತ ಕಾಳನಾಯಕರ ಸಾಂಸ್ಕೃತಿಕ ಕಾರ್ಯಕ್ರವನ್ನು ನಿರೂಪಿಸಿದರು. ಪ್ರೊ. ಕೆ.ವಿ. ಬಾಗಲಕೋಟಿ ಕಾರ್ಯಕ್ರಮ ನಿರೂಪಿಸಿದರು.ಪ್ರೊ. ಆನಂದ ದೇಸಾಯಿಪಟ್ಟಿ ವಂದಿಸಿದರು.

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯರಾದ ಎಸ್.ವ್ಹಿ. ಸಂಕನೂರ ಅವರು ಸನ್ಮಾನ ಸ್ವೀಕರಿಸಿ ಮಾತನಾಡಿ, ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಶ್ಲಾಘಿಸುತ್ತಾ, ವ್ಯಕ್ತಿತ್ವದ ಸರ್ವತೋಮುಖ ಬೆಳವಣಿಗೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯೆಯಷ್ಟೇ ಮಹತ್ವದ್ದಾಗಿವೆ. ಕೌಶಲ್ಯಾಧಾರಿತ ಜ್ಞಾನದ ಮೂಲಕ ಪ್ರತಿಯೊಬ್ಬರೂ ಜೀವನದ ಗುರಿ ತಲುಪಬೇಕೆಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here