ಬೆಂಗಳೂರು: ಸಿ.ಟಿ.ರವಿ ಅವರು ಅವ್ಯಾಷ್ಯ ಪದಬಳಕೆ ಮಾಡಿರುವುದು ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷ ಡಾ.ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿರುವ ಆರೋಪ ಸಂಬಂಧ ಮಾತನಾಡಿರುವ ಅವರು, ಸದನದ ಒಳಗೆ ಹಾಗೂ ಹೊರಗೆ ಜನಪ್ರತಿನಿಧಿಗಳ ನಡವಳಿಕೆಗಳು ಇತರರಿಗೆ ಮಾದರಿಯಾಗಿರಬೇಕು.
Advertisement
ಸಿ.ಟಿ.ರವಿ ಅವರು ಅಸಾಂವಿಧಾನಿಕ ಪದಬಳಕೆ ಮಾಡಿರುವುದು ಸದನದ ಇತಿಹಾಸಕ್ಕೆ ಕಪ್ಪುಚುಕ್ಕೆಯಾಗಿದೆ. ಸಿ.ಟಿ.ರವಿ ಅವರ ವಿರುದ್ಧ ಅಗತ್ಯ ಕಾನೂನು ಕ್ರಮಕೈಗೊಳ್ಳಬೇಕು ಎಂದು ಹೇಳಿದ್ದಾರೆ. ಇನ್ನೂ ಭಾರತದಲ್ಲಿ ಹೆಣ್ಣುಮಕ್ಕಳಿಗೆ ವಿಶೇಷ ಸ್ಥಾನಮಾನ ಮತ್ತು ಗೌರವ ನೀಡಲಾಗಿದೆ. ನಾಲಿಗೆಯು ನಾಗರಿಕತೆಯನ್ನ ಹೇಳುತ್ತದೆ ಎಂದು ಕೂಡ ತಿಳಿಸಿದ್ದಾರೆ.