ಮಗನ ಸಾವಿನ ಸುದ್ದಿ ಕೇಳಿ ತಾಯಿಗೆ ಹೃದಯಾಘಾತ: ಸಾವಿನಲ್ಲೂ ಒಂದಾದ ತಾಯಿ-ಮಗ

0
Spread the love

ಮಂಡ್ಯ: ಮಗನ ಸಾವಿನ ಸುದ್ದಿ ಕೇಳಿ ತಾಯಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ತಾಯಿ-ಮಗ ಸಾವಿನಲ್ಲೂ ಒಂದಾಗಿದ್ದಾರೆ. ಈ ಮನಕಲಕುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ನಡೆದಿದೆ.

Advertisement

ನೆಟ್ಕಲ್ ಗ್ರಾಮದ ಕೃಷ್ಣಮೂರ್ತಿ(20) ಹಾಗು ಮಹದೇವಮ್ಮ ಮೃತ ತಾಯಿ ಮಗನಾಗಿದ್ದು, ನೆನ್ನೆ ಬೆಳಿಗ್ಗೆ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಗ ಕೃಷ್ಣಮೂರ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇತ್ತ ಮಗನ ಸಾವಿನ ಸುದ್ದಿ ಕೇಳಿ ಕುಸಿದು ಬಿದ್ದು ಹೃದಯಾಘಾತದಿಂದ ತಾಯಿ ಮಹದೇವಮ್ಮ ಸಾವನಪ್ಪಿದ್ದಾರೆ. ತಾಯಿ-ಮಗನ ಸಾವಿನ ಈ ಮನಕಲುಕುವ ಘಟನೆಯಿಂದ ಇಡೀ ಗ್ರಾಮವೇ ಶೋಕ ಸಾಗರದಲ್ಲಿ ಮುಳುಗಿದ್ದು, ತಾಯಿ ಮಗ ಇಬ್ಬರನ್ನು ಅಕ್ಕಪಕ್ಕದಲ್ಲೇ ಗ್ರಾಮಸ್ಥರು ಅಂತ್ಯ ಸಂಸ್ಕಾರ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here