ಬೆಂಗಳೂರು:- ಕರಾವಳಿಯ ಪ್ರತಿ ಕಂಬಳಕ್ಕೂ 5 ಲಕ್ಷ ಅನುದಾನ ಕೊಡುವುದಾಗಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಂಬಳ ಪ್ರಿಯರಿಗೆ ಸಿಹಿ ಸುದ್ದಿ ಸಿಕ್ಕಂತಾಗಿದೆ.
Advertisement
ಬೆಳಗಾವಿಯಲ್ಲಿ ನಡೆದ ಅಧಿವೇಶನದಲ್ಲಿ ಕರಾವಳಿಯ ಶಾಸಕರು ಈ ಬಗ್ಗೆ ಬೇಡಿಕೆ ಸಲ್ಲಿಸಿದ್ದರು. ಸ್ವತಃ ಸ್ಪೀಕರ್ ಯುಟಿ ಖಾದರ್ ಕಂಬಳ ಪರ ಬ್ಯಾಟಿಂಗ್ ಮಾಡಿದ್ದರು. ಸರ್ಕಾರ ನೆರವು ಕೊಡದಿದ್ದರೆ ನಾವೇ ಹಣ ಸಂಗ್ರಹಿಸಿ ಕಂಬಳ ಮಾಡಲು ಗೊತ್ತು ಎಂದು ಚಾಟಿ ಬೀಸಿದ್ದರು.
ಯುಟಿ ಖಾದರ್ ಚಾಟಿ ಬೀಸಿದ ಬೆನ್ನಲ್ಲೇ ಕಂಬಳಕ್ಕೆ ಅನುದಾನ ಬಿಡುಗಡೆಗೆ ಸರ್ಕಾರ ಆದೇಶ ಮಾಡಿದೆ. ಮುಖ್ಯಮಂತ್ರಿಗಳ ಶಿಫಾರಸಿನ ಮೇರೆಗೆ ಪ್ರವಾಸೋದ್ಯಮ ಸಚಿವ ಹೆಚ್ಕೆ ಪಾಟೀಲ್ ಆದೇಶ ಹೊರಡಿಸಿದ್ದಾರೆ. 2024- 25 ನೇ ಸಾಲಿನ 24 ಜೋಡು ಕರೆ ಕಂಬಳಗಳಿಗೆ ತಲಾ 5 ಲಕ್ಷ ರೂ. ಘೋಷಣೆಯಾಗಿದೆ.