ವಿಜಯಸಾಕ್ಷಿ ಸುದ್ದಿ, ಗದಗ : ಸಮಿಪದ ತಿಮ್ಮಾಪೂರ ಗ್ರಾಮದ ರೈತ ಸಂಘದ ನಾಮ ಫಲಕದ ಮುಂದೆ ರಾಷ್ಟ್ರೀಯ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೈತ ಸಂಘದ ಗ್ರಾಮ ಘಟಕದ ಅಧ್ಯಕ್ಷ ಹುಚ್ಚೀರಪ್ಪ ಜೋಗಿನ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಗದಗ ಜಿಲ್ಲಾಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ಮಾತನಾಡಿ, ಭಾರತವು ಹಳ್ಳಿಗಳಿಂದ ಕೂಡಿದ ಕೃಷಿ ಪ್ರಧಾನ ದೇಶವಾಗಿದೆ. ಅನಾದಿ ಕಾಲದಿಂದಲೂ ನಮ್ಮ ದೇಶವನ್ನು ಮುನ್ನಡೆಸಿದ್ದು ಈ ನಮ್ಮ ರೈತರೇ ಎಂಬುದು ನಮಗೆ ಹೆಮ್ಮೆಯ ವಿಷಯವಾಗಿದೆ ಎಂದರು.
ರೈತ ಮುಖಂಡರಾದ ಪ್ರಧಾನಿ ದಿ. ಚೌಧರಿ ಚರಣ್ ಸಿಂಗ್ ಅವರ ಜನ್ಮದಿನದ ಸವಿನೆನಪಿಗಾಗಿ ಡಿಸೆಂಬರ್ ೨೩ರಂದು ಭಾರತಾದ್ಯಂತ ರಾಷ್ಟಿçÃಯ ರೈತ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಈ ಸಂದರ್ಭದಲ್ಲಿ ಶರಣಪ್ಪ ಜೋಗಿನ, ಬಾಳಪ್ಪ ಗಂಗರಾತ್ರಿ, ಹನುಮಪ್ಪ ಜೋಗಿನ, ಕರಿಯಪ್ಪ ಬಾಬರಿ, ಮಾರುತಿ ರಾಮಣ್ಣ ಖಂಡ್ರೆ, ಪರಸಪ್ಪ ಬನಾಪೂರ, ನಿಂಗಪ್ಪ ಹೊಸಮನಿ, ರಾಮಪ್ಪ ಯತ್ನಟ್ಟಿ ಪ್ರಕಾಶ ಕುಂಬಾರ ಮುಂತಾದ ರೈತರು ಪಾಲ್ಗೊಂಡಿದ್ದರು.



