ಬೆಳಗಾವಿ: ಬಿಜೆಪಿಯವರಿಗಾಗಲಿ, ಬೇರೆಯವರಿಗಾಗಲಿ ನನ್ನ ವಿರುದ್ಧ ಮಾತಾಡುವ ನೈತಿಕತೆ ಇಲ್ಲ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿ.ಕೆ ಸುರೇಶ್, ಡಿಕೆ ಶಿವಕುಮಾರ್ ಅವರ ಕಡೆಯವರಿಂದ ದಾಳಿ ನಡೆದಿದೆ ಎಂಬ ಮುನಿರತ್ನ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.
Advertisement
ನನಗೆ ಆ ವಿಚಾರ ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರಿಗೆ ಅವರೇ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ ಎಂದು ಹೇಳಿದ್ದಾರೆ. ಅವರ ವ್ಯಕ್ತಿತ್ವ ಏನು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಬಿಜೆಪಿಯವರಿಗಾಗಲಿ, ಬೇರೆಯವರಿಗಾಗಲಿ ನನ್ನ ವಿರುದ್ಧ ಮಾತಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.