ಬೆಂಗಳೂರು:- ಡಿಸೆಂಬರ್ 28ರವರೆಗೆ ಕರ್ನಾಟಕದ 19ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜತೆ ಕರ್ನಾಟಕದಲ್ಲೂ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ.
ಎಚ್ಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 27.8 0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.



