ನವದೆಹಲಿ: ಭಾರತದ ಮಾಜಿ ಪ್ರಧಾನಿ, ನವ ಭಾರತದ ಆರ್ಥಿಕತೆಯ ಸುಧಾರಕ, ವಿಶ್ವದ ಶ್ರೇಷ್ಠ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಕೊನೆಯುಸಿರೆಳೆದಿದ್ದಾರೆ. ಸದ್ಯ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರ ದೆಹಲಿಯ ಅವರ ನಿವಾಸದಲ್ಲಿದ್ದು, ಗಣ್ಯಾತಿಗಣ್ಯರು ಸಿಂಗ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಅದರಂತೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಕಾಂಗ್ರೆಸ್ನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಸಂಸದೆ ಪ್ರಿಯಾಂಕಾ ಗಾಂಧಿಯವರು ಅಂತಿಮ ನಮನ ಸಲ್ಲಿಸಿದ್ದಾರೆ.
ಭಾರತದ ಆರ್ಥಿಕ ಸುಧಾರಣೆಯ ವಾಸ್ತುಶಿಲ್ಪಿ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆಯನ್ನು ಶನಿವಾರ ನಿಗದಿಪಡಿಸಲಾಗಿದ್ದು, ಇಂದು ಅಧಿಕೃತ ಪ್ರಕಟಣೆ ಮಾಡಲಿದ್ದಾರೆ. ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಶನಿವಾರ ನಡೆಯಲಿದೆ.



