ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ವಿಧಿವಶರಾದ ಸುದ್ದಿ ತೀವ್ರ ನೋವುಂಟು ಮಾಡಿದೆ. ಕೇಂದ್ರ ಹಣಕಾಸು ಸಚಿವರಾಗಿ, ಆರ್ಬಿಐ ಗವರ್ನರ್ ಆಗಿ, ಆರ್ಥಿಕ ಸಲಹೆಗಾರರಾಗಿ, ರಾಜ್ಯಸಭೆಯ ಪ್ರತಿಪಕ್ಷ ನಾಯಕರಾಗಿ ಅನೇಕ ಹುದ್ದೆಗಳಲ್ಲಿ ರಾಷ್ಟçಸೇವೆ ಸಲ್ಲಿಸಿದ ಭವ್ಯ ಭಾರತದ ನಿರ್ಮಾತೃ ಡಾ. ಮನಮೋಹನ ಸಿಂಗ್ ಅವರ ನಿಧನದಿಂದ ದೇಶ ಒಬ್ಬ ಮುತ್ಸದ್ದಿ ನಾಯಕನನ್ನು ಕಳೆದುಕೊಂಡAತಾಗಿದೆ ಎಂದು ಮೈಸೂರು ಜಪದಕಟ್ಟೆ ಅರಮನೆಯ ಹಾಗೂ ಬನ್ನಿಕೊಪ್ಪ ಬೃಹನ್ಮಠದ ಷ.ಬ್ರ.ಡಾ. ಶ್ರೀ ಸುಜ್ಞಾನದೇವ ಶಿವಾಚಾರ್ಯ ಸ್ವಾಮೀಜಿ ಶೋಕ ವ್ಯಕ್ತಪಡಿಸಿದ್ದಾರೆ.
Advertisement
ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಈ ನೋವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ.