ಮರಾಠಿ ನಟಿ ಊರ್ಮಿಳಾ ಕಾರು ಅಪಘಾತ: ಕಾರ್ಮಿಕ Spot Death, ಓರ್ವ ಗಂಭೀರ!

0
Spread the love

ಮುಂಬೈ:- ಕಾರು ಅಪಘಾತದಲ್ಲಿ ಮರಾಠಿ ನಟಿ ಊರ್ಮಿಳಾ ಕೊಠಾರಿಗೆ ಗಂಭೀರ ಗಾಯ ವಾಗಿರುವ ಘಟನೆ ಮುಂಬೈನಲ್ಲಿ ಜರುಗಿದೆ.

Advertisement

ಘಟನೆಯಲ್ಲಿ ಕಾರ್ಮಿಕನೋರ್ವ ಸಾವನ್ನಪ್ಪಿದ್ದು, ಒರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ನಟಿ ಊರ್ಮಿಳಾ ಹಾಗೂ ಅವರ ಕಾರಿನ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.

ನಟಿ ಉರ್ಮಿಳಾ ಕೊಠಾರೆ ಚಿತ್ರೀಕರಣ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ನಟಿಯ ಕಾರು ಅತಿವೇಗದಲ್ಲಿದ್ದು, ಚಾಲಕನ ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ.

ಪರಿಣಾಮ ಮೆಟ್ರೋ ರೈಲಿನಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಕಾರ್ಮಿಕರಿಗೆ ಡಿಕ್ಕಿ ಹೊಡೆದಿದೆ. ಓರ್ವ ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಲ್ಲಿ ನಟಿ ಉರ್ಮಿಳಾ ಹಾಗೂ ಚಾಲಕ ಕೂಡ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನೂ ಸೂಕ್ತ ಸಮಯಕ್ಕೆ ಏರ್​ಬ್ಯಾಗ್ ತೆರೆದುಕೊಂಡ ಕಾರಣಕ್ಕೆ ನಟಿ ಹಾಗೂ ಆಕೆಯ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದಲ್ಲಿ ನಟಿಯ ಕಾರಿಗೆ ಭಾರೀ ಹಾನಿಯಾಗಿದೆ.


Spread the love

LEAVE A REPLY

Please enter your comment!
Please enter your name here