ಮೈಸೂರು: ಕಿಚ್ಚ ಸುದೀಪ್ ಅಭಿನಯದ ಮ್ಯಾಕ್ಸ್ ಸಿನಿಮಾ ರಾಜ್ಯಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಅಭಿಮಾನಿಗಳು ಮ್ಯಾಕ್ಸ್ ಸಿನಿಮಾದ ಕಥೆ, ಡೈರೆಕ್ಷನ್, ಸುದೀಪ್ ಮಾಸ್ ಆ್ಯಕ್ಟಿಂಗ್‌ಗೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ. ಹೀಗಾಗಿ ನಟ ಕಿಚ್ಚ ಸುದೀಪ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ.
Advertisement
ಬೆಳಗ್ಗೆಯೇ ಮೈಸೂರಿಗೆ ಭೇಟಿ ನೀಡಿದ ಅವರು ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ನೆಚ್ಚಿನ ನಟ ಬರುವುದನ್ನು ತಿಳಿಯುತ್ತಿದ್ದಂತೆ ಬೆಟ್ಟದಲ್ಲಿ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು. ಕಿಚ್ಚ ಸುದೀಪ್ ನೋಡಿ ಫ್ಯಾನ್ಸ್ ಶಿಳ್ಳೆ ಹೊಡೆದು ಜೈಕಾರ ಕೂಗಿದರು.
ಈ ವೇಳೆ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು. ಪೂಜೆ ಬಳಿಕ ಸುದೀಪ್ ಹೊರಬಂದು ನೆರೆದಿದ್ದ ಅಭಿಮಾನಿಗಳತ್ತ ಕೈಬೀಸಿದರು. ನಟನನ್ನು ಕಂಡು ಫ್ಯಾನ್ಸ್ ಸಂತಸ ವ್ಯಕ್ತಪಡಿಸಿದ್ದಾರೆ.