ಸಮುದ್ರದಲ್ಲಿ ಸ್ನಾನ ಮಾಡಲು ಹೋಗಿ ಅವಘಡ: ನೀರಲ್ಲಿ ಮುಳುಗಿ ಇಬ್ಬರು ಸಾವು!

0
Spread the love

ಉಡುಪಿ:- ಉಡುಪಿಯ ಹೆಜಮಾಡಿಯಲ್ಲಿ ಸಮುದ್ರಕ್ಕೆ ಸ್ನಾನಕ್ಕೆ ತೆರಳಿದ್ದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ.

Advertisement

ಅಮವಾಸ್ಯೆಯ ದಿನದಂದು ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಹೆಜಮಾಡಿಯಲ್ಲಿ ಸಮುದ್ರಕ್ಕೆ ಸ್ನಾನ ಮಾಡಲು ತೆರಳಿದ ವೇಳೆ ಅವಘಡ ಸಂಭವಿಸಿದೆ. ಸಮುದ್ರಕ್ಕೆ ಈಜಲು ತೆರಳಿದ್ದ 6 ಜನರ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಅಕ್ಷಯ್ ಮತ್ತು ಚಿರಾಗ್ ಅಮೀನ್ ಮೃತರು. ಸಮುದ್ರದಲ್ಲಿ ಮುಳುಗುತ್ತಿದ್ದ 6 ಜನರನ್ನು ರಕ್ಷಿಸಲು ಸ್ಥಳೀಯರು ಮುಂದಾಗಿದ್ದರು. ಈ ಪೈಕಿ ನಾಲ್ವರನ್ನು ರಕ್ಷಣೆ ಮಾಡಲಾಗಿದೆ. ಇನ್ನುಳಿದ ಇಬ್ಬರನ್ನು ರಕ್ಷಿಸಲು ಯತ್ನಿಸಿದರೂ ಆ ಪ್ರಯತ್ನ ಫಲಪ್ರದವಾಗಲಿಲ್ಲ. 6 ಯುವಕರಲ್ಲಿ ನಾಲ್ಕು ಜನರನ್ನು ಮಾತ್ರ ಕಾಪಾಡಲು ಸಾಧ್ಯವಾಯಿತು.

ಅಮವಾಸ್ಯೆಯಂದೇ ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here