ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ: ಶಿರಹಟ್ಟಿ ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ಭಾರೀ ವಾಹನಗಳ ಸಂಚಾರದಿಂದ ರಸ್ತೆಗಳೆಲ್ಲ ಹಾಳಾಗಿದ್ದು, ತಕ್ಷಣವೇ ರಸ್ತೆಗಳನ್ನು ದುರಸ್ತಿ ಮಾಡಬೇಕೆಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ನಾಗರಾಜ ಲಕ್ಕುಂಡಿ ಸೇರಿದಂತೆ ಸಾರ್ವಜನಿಕರು ಸೋಮವಾರ ತಹಸೀಲ್ದಾರರ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಾಗರಾಜ ಲಕ್ಕುಂಡಿ, ಶಿರಹಟ್ಟಿ ಪಟ್ಟಣಕ್ಕೆ ಒಳಬರುವ ರಸ್ತೆಗಳಲ್ಲಿ ಗದಗ-ಹೊನ್ನಾಳಿ ರಾಜ್ಯ ಹೆದ್ದಾರಿ ಕಾಮಗಾರಿ ಮಾಡುವ ಸಂದರ್ಭದಲ್ಲಿ ಭಾರೀ ವಾಹನಗಳ ಸಂಚಾರದಿಂದ ರಸ್ತೆಗಳೆಲ್ಲ ಹಾಳಾಗಿ ಹೋಗಿದ್ದು, ಲಘುವಾಹನ ಸೇರಿದಂತೆ ಬೈಕ್ ಸವಾರರ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಇದರಿಂದ ಅಪಘಾತಗಳು ಸಹ ಆಗುತ್ತಿವೆ. ಈ ಬಗ್ಗೆ ರಾಜ್ಯ ಹೆದ್ದಾರಿ ಇಲಾಖೆಗೆ ಮೌಖಿಕವಾಗಿ ಹಾಗೂ ಲಿಖಿತವಾಗಿ ತಿಳಿಸಿದರೂ ಯಾವುದೇ ಕ್ರಮ ಕೈಕೊಂಡಿಲ್ಲ. ಈ ರಸ್ತೆಗಳ ಡಾಂಬರೀಕರಣ ಕಾರ್ಯ ಮಾಡುವ ಜವಾಬ್ದಾರಿ ರಾಜ್ಯ ಹೆದ್ದಾರಿ ನಿರ್ಮಾಣ ಮಾಡುತ್ತಿರುವ ಇಲಾಖೆಯದ್ದಾಗಿದೆ. ಸಂಬಂಧಪಟ್ಟ ಇಲಾಖೆಗೆ ಸೂಚಿಸಿ ರಸ್ತೆ ಡಾಂಬರೀಕರಣ ಮಾಡಿಸಿಕೊಡಬೇಕು ಎಂದು ವಿನಂತಿಸಿದರು.
ಬಿಜೆಪಿ ಜಿಲ್ಲಾ ಪ್ರ.ಕಾರ್ಯದರ್ಶಿ ಫಕ್ಕೀರೇಶ ರಟ್ಟಿಹಳ್ಳಿ, ತಾ.ಪಂ ಮಾಜಿ ಅಧ್ಯಕ್ಷ ಜಾನು ಲಮಾಣಿ, ಗೂಳಪ್ಪ ಕರಿಗಾರ, ಅಕ್ಬರಸಾಬ ಯಾದಗಿರಿ, ಮಲ್ಲು ಕಬಾಡಿ, ವಿನೋದ ಕಪ್ಪತ್ತನವರ, ಮಂಜುನಾಥ ಬಳಿಗಾರ, ಮಲ್ಲು ಕುದುರೆ, ತಿಪ್ಪಣ್ಣ ಲಮಾಣಿ, ವೀರಣ್ಣ ಅಂಗಡಿ, ಗಿರೀಶ ತುಳಿ, ಸಂತೋಷ ಕುಬೇರ, ಯಲ್ಲಪ್ಪ ಖಾನಾಪೂರ, ಬಸವರಾಜ ವಡವಿ ಮುಂತಾದವರು ಉಪಸ್ಥಿತರಿದ್ದರು.