HomeBengaluru Newsಹೊಸವರ್ಷದ ಹರುಷ: ಅಬಕಾರಿ ಇಲಾಖೆಗೆ ಹರಿದು ಬಂತು ಭರ್ಜರಿ ಆದಾಯ; ಅರ್ಧ ದಿನದಲ್ಲೇ ಗಳಿಸಿದೆಷ್ಟು?

ಹೊಸವರ್ಷದ ಹರುಷ: ಅಬಕಾರಿ ಇಲಾಖೆಗೆ ಹರಿದು ಬಂತು ಭರ್ಜರಿ ಆದಾಯ; ಅರ್ಧ ದಿನದಲ್ಲೇ ಗಳಿಸಿದೆಷ್ಟು?

For Dai;y Updates Join Our whatsapp Group

Spread the love

ಬೆಂಗಳೂರು:- ಅಬಕಾರಿ ಇಲಾಖೆಗೆ ಹೊಸವರ್ಷ ಹರುಷ ತಂದಿದೆ. ಡಿಸೆಂಬರ್ 31 ರ ಮಂಗಳವಾರ ಅಬಕಾರಿ ಇಲಾಖೆಯ ನಿರೀಕ್ಷೆಗೂ ಮೀರಿ ಮದ್ಯ ಮಾರಾಟವಾಗಿದೆ.

ಮಂಗಳವಾರ ಬೆಳಿಗ್ಗೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಧ ದಿನದ ಅವಧಿಯಲ್ಲಿ ಕೆಎಸ್​ಬಿಸಿಎಲ್​ನಿಂದ ಬರೋಬ್ಬರಿ 308 ಕೋಟಿ ರುಪಾಯಿ ಮದ್ಯ ಮಾರಾಟವಾಗಿದೆ.

ಅಬಕಾರಿ ಇಲಾಖೆ 250 ಕೋಟಿ ರೂ. ಮೌಲ್ಯದ ಮದ್ಯ ಮಾರಾಟದ ಗುರಿ ಇಟ್ಟುಕೊಂಡಿತ್ತು. ಆದರೆ, ಅದನ್ನೂ ಮೀರಿ ಮಾರಾಟವಾಗಿದೆ. ಕಳೆದ ವರ್ಷ 2023 ರ ಡಿಸೆಂಬರ್ 31 ರಂದು 193 ಕೋಟಿ ರುಪಾಯಿ ಮದ್ಯ ಮಾರಾಟ ಆಗಿತ್ತು. 2024 ಡಿಸೆಂಬರ್ 31 ರಂದು 7,305 ಮದ್ಯ ಮಾರಾಟಗಾರರು ಕೆಎಸ್​ಬಿಸಿಎಲ್​​ನಿಂದ ಮದ್ಯ ಖರೀದಿ ಮಾಡಿದ್ದಾರೆ.

ಐಎಂಎಲ್ 4,83,715 ಲಕ್ಷ ಬಾಕ್ಸ್ ಮಾರಾಟದಿಂದ 250.25 ಕೋಟಿ ಆದಾಯ ಸಂಗ್ರಹವಾಗಿದೆ. ಬಿಯರ್- 2,92,339 ಲಕ್ಷ ಬಾಕ್ಸ್ ಮಾರಾಟದಿಂದ 57,75 ಕೋಟಿ ಆದಾಯ ಸಂಗ್ರಹವಾಗಿದೆ. ಒಟ್ಟು 7,76,042 ಲಕ್ಷ ಬಾಕ್ಸ್ ಮದ್ಯ ಮಾರಾಟದಿಂದ ಒಟ್ಟು 308 ಕೋಟಿ ರುಪಾಯಿ ‌ಆದಾಯ ಸಂಗ್ರಹವಾಗಿದೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!