]ವಿಜಯಸಾಕ್ಷಿ ಸುದ್ದಿ, ಗದಗ: ಡಿ.27ರಿಂದ 29ರವರೆಗೆ ಬೆಂಗಳೂರಿನಲ್ಲಿ ನಡೆದ 19ನೇ ರಾಜ್ಯ ಮಟ್ಟದ ಎಂ.ಟಿ.ಬಿ ಸೈಕ್ಲಿಂಗ್ U/14, Cross Country Time Trial ನಲ್ಲಿ ಗದಗ ಜಿಲ್ಲೆಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಕ್ರೀಡಾ ವಸತಿ ನಿಲಯದ ಬಾಲಕಿಯರಾದ ಪ್ರಿಯಾಂಕಾ ಬೆಳ್ಳಿ ಪದಕ, ಸೌಂದರ್ಯ ಕಂಚಿನ ಪದಕ ಹಾಗೂ ಭಾಗ್ಯಾ ಮೇಲ್ಮನಿ ಇವರು 5ನೇ ಸ್ಥಾನ ಗಳಿಸಿ ವಿಜೇತರಾಗಿದ್ದಾರೆ. ಬಾಲಕರ ವಿಭಾಗದಲ್ಲಿ ಹನುಮಂತ ಕಲಿ ಬೆಳ್ಳಿ ಪದಕ ಹಾಗೂ ಶಿವಾನಂದ ಬಂಡಿ 4ನೇ ಸ್ಥಾನ ಗಳಿಸಿದ್ದಾರೆ.
U/16, Cross Country Time Trial ನಲ್ಲಿ ಬಾಲಕಿಯರ ವಿಭಾಗದಲ್ಲಿ ಭಾರತಿ ಭಜಂತ್ರಿ 5ನೇ ಸ್ಥಾನ ಹಾಗೂ ಪಲ್ಲವಿ ಕುರಿ 6ನೇ ಸ್ಥಾನ ಗಳಿಸಿದ್ದು, U/18, ಅಡಿoss ಅouಟಿಣಡಿಥಿ ಖಿime ಖಿಡಿiಚಿಟನಲ್ಲಿ ಪವಿತ್ರಾ ಕುರ್ತಕೋಟಿ, ಚಿನ್ನದ ಪದಕ ಗಳಿಸಿದ್ದಾರೆ.
ಕ್ರೀಡಾ ವಸತಿ ನಿಲಯದ ಸೈಕ್ಲಿಂಗ್ ಕ್ರೀಡಾಪಟುಗಳಿಗೆ ಹಾಗೂ ತರಬೇತುದಾರರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಚ್.ಕೆ. ಪಾಟೀಲ, ಜಿಲ್ಲಾಧಿಕಾರಿ ಗೋವಿಂದರಡ್ಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭರತ್ ಎಸ್., ಜಿ.ಪಂ ಮಾಜಿ ಅಧ್ಯಕ್ಷರಾದ ಸಿದ್ದಲಿಂಗೇಶ್ವರ ಪಾಟೀಲ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಶರಣು ಗೋಗೇರಿ, ಜಿಲ್ಲಾ ಅಮೆಚ್ಯೂರ್ ಸೈಕ್ಲಿಂಗ್ ಅಸೋಸಿಯೇಶನ್ ಪದಾಧಿಕಾರಿಗಳು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಿಬ್ಬಂದಿಗಳು ಅಭಿನಂದನೆ ಸಲ್ಲಿಸಿದ್ದಾರೆ.