ಬೆಂಗಳೂರು: ಅಪ್ಪಾ ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಗಳು ಬಾಣಂತಿಯರ ಪಾಲಿಗೆ ಮರಣ ಮೃದಂಗ ಬಾರಿಸುವಂತಾಗಿದೆ.
ಅಪ್ಪಾ ಸಿದ್ದರಾಮಯ್ಯನವರೇ, ನಿಮ್ಮ 2000 ರೂಪಾಯಿ ನೀಡುವ ಬದಲು ಮೊದಲು ಬಾಣಂತಿಯರ ಸಾವು ನಿಲ್ಲಿಸಿ. ಔಷಧ ನಿಯಂತ್ರಣದಲ್ಲಿ ಗೋಲ್ಮಾಲ್ ಆಗುತ್ತಿರುವುದನ್ನು ತಪ್ಪಿಸಿ. ರಾಜ್ಯದಲ್ಲಿ ಬಾಣಂತಿಯರಿಗೆ ಬದುಕುವ ಗ್ಯಾರಂಟಿಯನ್ನು ಸರ್ಕಾರ ಕೊಡಲಿ ಎಂದು ಹೇಳಿದ್ದಾರೆ.
ಇನ್ನೂ ಬಾಣಂತಿಯರ ಸಾವಿಗೆ ಸಂಬಂಧಿಸಿದ ನ್ಯಾಯಾಂಗ ತನಿಖೆ ಬಗ್ಗೆ, ಡೆತ್ ಆಡಿಟ್ ಬಗ್ಗೆ ಇನ್ನೂ ಯಾವುದೇ ಮಾಹಿತಿ ಬಂದಿಲ್ಲ. ಕಳಪೆ ದ್ರಾವಣ ಪೂರೈಸಿದ ಕಂಪನಿ ವಿರುದ್ಧ ದೆಹಲಿಗೆ ಹೋಗಿ ದೂರು ಕೊಡುವುದಾಗಿ ಆರೋಗ್ಯ ಸಚಿವರು ಹೇಳಿದ್ದರು. ಆದರೆ ಇನ್ನೂ ಯಾಕೆ ಹೋಗಿ ದೂರು ಕೊಟ್ಟಿಲ್ಲ ಎಂದು ಅಶೋಕ್ ಪ್ರಶ್ನಿಸಿದ್ದಾರೆ.