ಬೆಂಗಳೂರು: ಸಚಿನ್ ಸಾವಿನ ಪತ್ರದಲ್ಲಿ ಎಲ್ಲಿಯೂ ನನ್ನ ಹೆಸರನ್ನು ಉಲ್ಲೇಖಿಸಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನ್ನ ವಿರುದ್ಧ ಆಪಾದನೆ ಮಾಡುವುದಾದರೆ ಸರಿಯಾದ ದಾಖಲೆಸಮೇತವಾಗಿ ಮಾಡಲಿ.
ಸಚಿನ್ ಸಾವಿನ ಪತ್ರದಲ್ಲಿ ಎಲ್ಲಿಯೂ ನನ್ನ ಹೆಸರನ್ನು ಉಲ್ಲೇಖಿಸಿಲ್ಲ. ಬಿಜೆಪಿಗರು ಸುಖಾಸುಮ್ಮನೆ ನನ್ನ ಬಗ್ಗೆ ವಾದ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ, ಪಿ.ರಾಜೀವ್ ಸುಳ್ಳು ಆರೋಪ ಮಾಡಿದ್ದಾರೆ. ಅವರೀಗ ಸುಳ್ಳಿನ ಶೂರರಾಗಿದ್ದಾರೆ. ಇವರ ವಿರುದ್ಧ ಮಾನನಷ್ಟ ಮೊಕದ್ದಮೆಯನ್ನು ಈ ಹಿಂದೆಯೇ ಹಾಕಿದ್ದೆ. ಅವರು ಹಿಟ್ ಆ್ಯಂಡ್ ರನ್ ಹೇಳಿಕೆ ನೀಡುವಲ್ಲಿ ಪಿಎಚ್‌ಡಿ ಪಡೆದಿದ್ದಾರೆ ಎಂದು ಟೀಕೆ ಮಾಡಿದ್ದಾರೆ.



