HomeKarnataka NewsHD Kumaraswamy: ಸಾರಿಗೆ ದರ ಏರಿಕೆ ಜನಸಾಮಾನ್ಯರಿಗೆ ಹೊರಯಾಗಲಿದೆ: HD ಕುಮಾರಸ್ವಾಮಿ!

HD Kumaraswamy: ಸಾರಿಗೆ ದರ ಏರಿಕೆ ಜನಸಾಮಾನ್ಯರಿಗೆ ಹೊರಯಾಗಲಿದೆ: HD ಕುಮಾರಸ್ವಾಮಿ!

For Dai;y Updates Join Our whatsapp Group

Spread the love

ಮೈಸೂರು:- ಸಾರಿಗೆ ದರ ಏರಿಕೆ ಜನಸಾಮಾನ್ಯರಿಗೆ ಹೊರೆಯಾಗಲಿದೆ ಎಂದು ಹೇಳುವ ಮೂಲಕ ಕೇಂದ್ರ ಸಚಿವ HD ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.

ಬಸ್ ಟಿಕೆಟ್ ದರ ಏರಿಕೆ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಮಂತ್ರಿ, ಶಾಸಕರ ಮಕ್ಕಳು ಬಸ್‌ನಲ್ಲಿ ಓಡಾಡುವುದಿಲ್ಲ. ಓಡಾಡುವವರೆಲ್ಲಾ ಜನಸಾಮಾನ್ಯರು. ಸಾರಿಗೆ ದರ ಏರಿಕೆ ಜನಸಾಮನ್ಯರಿಗೆ ಹೊರೆಯಾಗಲಿದೆ.

ಸರ್ಕಾರ ಗ್ಯಾರಂಟಿಯನ್ನ ನಿಲ್ಲಿಸಲು ಕಾರಣ ಹುಡುಕುತ್ತಿದೆ. ಹೇಗಾದರು ಮಾಡಿ ಗ್ಯಾರಂಟಿ ನಿಲ್ಲಿಸಲು ನೆಪ ಹುಡುಕುತ್ತಿದ್ದಾರೆ. ಯಾವುದೇ ಕಾರಣಕ್ಕೂ 5 ಗ್ಯಾರಂಟಿ ನಿಲ್ಲಿಸಬೇಡಿ. ಸಾಕಷ್ಟು ಜನರಿಗೆ ಇದರಿಂದ ಅನುಕೂಲ ಆಗಿದೆ ಎಂದು ಹೇಳುತ್ತಿದ್ದಾರೆ. ಆದರೆ ಅವರಿಂದಲೇ ಕಿತ್ತು ಅವರಿಗೆ ಕೊಡುವ ಕೆಲಸವನ್ನ ಸರ್ಕಾರ ಮಾಡಬಾರದು.

ಮಧ್ಯಮ ವರ್ಗದ ಜನರ ಬದುಕಿನ ಜೊತೆ ರಾಜ್ಯ ಸರ್ಕಾರ ಚೆಲ್ಲಾಟವಾಡುತ್ತಿದೆ. ಅತ್ತೆದನ್ನ ಅಳಿಯ ದಾನ ಮಾಡಿದ ಅನ್ನೋ ಮಾತಿನಂತೆ ಅವರಿಂದ ಕಿತ್ತು ಅವರಿಗೆ ಕೊಡೊಕೆ ಇವರೇ ಆಗಬೇಕಾ? ಬಸ್‌ನಲ್ಲಿ ಓಡಾಡುವವರೆಲ್ಲಾ ಜನಸಾಮಾನ್ಯರು. ದಿನಕ್ಕೆ 10 ರೂ. ಹೆಚ್ಚಿಗೆಯಾದರೂ ಅದು ಅವರಿಗೆ ಹೊರೆಯಾಗಲಿದೆ ಎಂದು ವಾಗ್ದಾಳಿ ನಡೆಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!