ಬೆಂಗಳೂರು: ಹಾಸ್ಟೆಲ್ ಕಟ್ಟಡದಿಂದ ಕಾಲು ಜಾರಿ ಬಿದ್ದು ಎಂಬಿಎ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ನಿಲೇ ಕೈಲಾಶ್ ಭಾಯ್ ಪಟೇಲ್ ಮೃತ ವಿದ್ಯಾರ್ಥಿಯಾಗಿದ್ದು, ಗುಜರಾತ್ ಮೂಲದ ನಿಲಯ್ ಕೈಲಾಶ್‌ಭಾಯ್ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದನು.
Advertisement
ಶನಿವಾರ ರಾತ್ರಿ ಕ್ಯಾಂಪಸ್‌ನಲ್ಲಿರುವ ಸ್ನೇಹಿತರೊಬ್ಬರ ಕೊಠಡಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಪಟೇಲ್ ತಮ್ಮ ಕೋಣೆಗೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ. ಭಾನುವಾರ ಬೆಳಗ್ಗೆ ಸೆಕ್ಯೂರಿಟಿ ಗಾರ್ಡ್ ಶವ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಇನ್ನೂ ಘಟನೆ ಸಂಬಂಧ ಮೈಕೋಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.