ಬೆಂಗಳೂರು: ನಗದು ರಹಿತ ವೈದ್ಯಕೀಯ ಚಿಕಿತ್ಸಾ ಯೋಜನೆಗೆ ಚಾಲನೆ ನೀಡುವ ಮೂಲಕ KSRTC ನೌಕರರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಕೆಎಸ್‌ಆರ್‌ಟಿಸಿ ಆರೋಗ್ಯ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಆರೋಗ್ಯ ಕಾರ್ಡ್ ಮೂಲಕ ಸಿಬ್ಬಂದಿಯ ಕುಟುಂಬದ ಸದಸ್ಯರು (ಪತಿ, ಪತ್ನಿ, ಮಕ್ಕಳು, ತಂದೆ, ತಾಯಿ) ಈ ಸೌಲಭ್ಯವನ್ನು ಪಡೆಯಬಹುದು. ಒಟ್ಟಾರೆಯಾಗಿ, ಕುಟುಂಬದ ಆರು ಸದಸ್ಯರಿಗೆ ನಗದು ರಹಿತ ಆರೋಗ್ಯ ಸೇವೆ ಲಭ್ಯವಾಗಲಿದೆ. ನೌಕರರು ನಿವೃತ್ತಿಯಾಗುವವರೆಗೂ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.
ಯೋಜನೆ ಉದ್ಘಾಟನೆ ಮಾಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದೊಂದು ಒಳ್ಳೆ ಕಾರ್ಯಕ್ರಮ. ಬಹಳ ದಿನದಿಂದ ಇದರ ಬೇಡಿಕೆ ಇತ್ತು. ಇಂದು ಜಾರಿ ಮಾಡಿದ್ದೇವೆ. ನೌಕರರು ಮತ್ತು ಅವರ ಕುಟುಂಬಗಳಿಗೂ ಅನ್ವಯ ಆಗಲಿದೆ, ಉಪಯೋಗ ಆಗಲಿದೆ. ಎಲ್ಲಿ ಬೇಕಾದರೂ ಚಿಕಿತ್ಸೆ ಪಡೆಯಬಹುದು. ಕಾರ್ಡ್ ತೋರಿಸಿದರೆ ಚಿಕಿತ್ಸೆ ಕೊಡುತ್ತಾರೆ. ಏನೇ ಕಾಯಿಲೆ ಇದ್ದರೂ ಚಿಕಿತ್ಸೆ ಸಿಗಲಿದೆ ಎಂದು ಹೇಳಿದ್ದಾರೆ.