ತುಮಕೂರು: ಟ್ರಾಕ್ಟರ್ ನ ಟ್ರೇಲರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾದ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಓಬಳಾಪುರ ಬಳಿ ನಡೆದಿದೆ.
Advertisement
ಮಹ್ಮದ್ ಆಸೀಫ್ (12), ಮಮ್ತಾಜ್ (38) ಮತ್ತು ಶಾಖೀರ್ ಹುಸೇನ್ (48) ಮೃತ ದುರ್ಧೈವಿಗಳಾಗಿದ್ದು, ರಸ್ತೆಯಲ್ಲಿ ಮುಂದೆ ಸಾಗುತ್ತಿದ್ದ ಟ್ರ್ಯಾಕ್ಟರ್ಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಮೃತರು ಮಧುಗಿರಿ ತಾಲೂಕಿನ ಗುಡ್ಡೆನಹಳ್ಳಿ ಗ್ರಾಮದವರು ಎನ್ನಲಾಗಿದೆ. ಸ್ಥಳಕ್ಕೆ ಎಸ್ ಪಿ ಅಶೋಕ್ ವೆಂಕಟ್ ಭೇಟಿ ಪರಿಶೀಲನೆ ನಡೆಸಿದ್ದಾರೆ. ಕೋರಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.