ತುಮಕೂರು:- ಟ್ರಾಕ್ಟರ್ ಟ್ರೈಲರ್ ಗೆ ಬೈಕ್ ಗುದ್ದಿದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ತುಮಕೂರು ತಾಲೂಕಿನ ಓಬಳಾಪುರ ಗೇಟ್ ಬಳಿ ಜರುಗಿದೆ.
Advertisement
ಮಹಮದ್ ಆಸೀಫ್(12), ಮಮ್ತಾಜ್ (38), ಶಾಖೀರ್ ಹುಸೇನ್(48) ಮೃತ ದುರ್ದೈವಿಗಳು. ಇವರುಗಳು ಮಧುಗಿರಿ ತಾಲೂಕಿನ ಗುಡ್ಡೇನಹಳ್ಳಿ ಮೂಲದವರು ಎಂದು ತಿಳಿದು ಬಂದಿದೆ.
ಟ್ರಾಕ್ಟರ್ ಹಿಂಬದಿಯ ಟ್ರೈಲರ್ ಗೆ ಬೈಕ್ ಗುದ್ದಿದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮಾಹಿತಿ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಎಸ್ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಅಲ್ಲದೇ ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನೆ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.