ಹಾಸನ: ಪೆನ್‍ಡ್ರೈವ್ ಹಂಚಿ ನೀವು ಅಚಾನಕ್ಕಾಗಿ ಸಂಸದರಾಗಿದ್ದೀರಿ ಎಂದು ಸಂಸದ ಶ್ರೇಯಸ್ ಪಟೇಲ್ ವಿರುದ್ಧ ಎಂಎಲ್‍ಸಿ ಸೂರಜ್ ರೇವಣ್ಣ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಹಾಸನ ಜಿಲ್ಲೆಗೆ ನಿಮ್ಮ ಕೊಡುಗೆ ಏನು ಎಂದು ಸಂಸದರು ಪ್ರಶ್ನಿಸಿದ್ದಾರೆ. ಅವರಿಗೆ ಮಾಹಿತಿ ಕೊರತೆ ಇರಬೇಕು.
ಮಾಡಿರುವ ಕೆಲಸ ಕಣ್ಣೆದುರೇ ಇದೆ. ನಾನು ಇಡೀ ಜಿಲ್ಲೆಗೆ ಸಹಕಾರ ಆಗುವ ರೀತಿ ಅನುದಾನ ಕೊಟ್ಟಿದ್ದೇನೆ. ಮೂರು ವರ್ಷದಲ್ಲಿ 50 ಕೋಟಿ ರೂ. ಅನುದಾನ ಕೊಟ್ಟಿದ್ದೇನೆ. ಸಾವಿರಕ್ಕೂ ಹೆಚ್ಚು ಹಳ್ಳಿಗಳಿಗೆ ಅನುದಾನ ಹೋಗಿದೆ. ಪೆನ್‍ಡ್ರೈವ್ ಹಂಚಿ ನೀವು ಅಚಾನಕ್ಕಾಗಿ ಸಂಸದರಾಗಿದ್ದೀರಿ ಎಂದು ವಾಗ್ದಾಳಿ ನಡೆಸಿದ್ದಾರೆ.
ಇನ್ನೂ ಸಂಸದನಾಗಿದ್ದೇನೆ ಎಂದು ದೊಡ್ಡದಾಗಿ ಕೇಂದ್ರ ಸಚಿವರಿಗೆ ಮನವಿ ಕೊಡುವುದಲ್ಲ. ಕಾಡಾನೆ ಸಮಸ್ಯೆ ಬಗ್ಗೆ ಕೇಂದ್ರ ಅರಣ್ಯ ಸಚಿವರಿಗೆ ಮನವಿ ಕೊಟ್ಟಿದ್ದಾರೆ. ರಾಜ್ಯ ಸರ್ಕಾರ ಅವರದ್ದೇ ಇದೆ. ರೈಲ್ವೆ ಬ್ಯಾರಿಕೇಡ್ ಎಷ್ಟು ಕಡೆ ಅಳವಡಿಸಿದ್ದಾರೆ? ಕೇಂದ್ರ ಸರ್ಕಾರದ ಬಳಿ ಏಕೆ ಹೋಗಬೇಕು? ಹಳ್ಳಿಗಳಿಗೆ ಹೋಗಿ ನಿಮ್ಮ ಕುಟುಂಬದ ಕೊಡುಗೆ ಏನಿದೆ? ನಮ್ಮ ಕೊಡುಗೆ ಏನಿದೆ ಗೊತ್ತಾಗುತ್ತೆ ಎಂದಿದ್ದಾರೆ.