ಬೆಂಗಳೂರು:- ಗೃಹ ಸಚಿವ ಜಿ ಪರಮೇಶ್ವರ್ ಅವರ ಡಿನ್ನರ್ ಮೀಟಿಂಗ್ ಗೆ ಹೈಕಮಾಂಡ್ ಬ್ರೇಕ್ ಹಾಕಿದೆ. ದಲಿತ ನಾಯಕರ ಜೊತೆಗಿನ ಡಿನ್ನರ್ ಮೀಟಿಂಗ್ ಅನ್ನು ಹೈಕಮಾಂಡ್ ಸೂಚನೆ ಮೇರೆಗೆ ಇದೀಗ ಜಿ ಪರಮೇಶ್ವರ್ ಮುಂದೂಡಿದ್ದಾರೆ.
ಈ ಸಂಬಂಧ ಪ್ರಕಟಣೆ ಹೊರಡಿಸಿದ ಜಿ ಪರಮೇಶ್ವರ್, ಇದೇ ಜ.8 ರಂದು ರಾಜ್ಯ ಕಾಂಗ್ರೆಸ್ ಪಕ್ಷದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಸಚಿವರು, ಶಾಸಕರು, ಸಂಸದರು ಹಾಗೂ ಮುಖಂಡರ ಸಭೆಯನ್ನು ಬೆಂಗಳೂರಿನ ರ‍್ಯಾಡಿಸನ್ ಬ್ಲೂ ಹೋಟೆಲ್‌ನಲ್ಲಿ ಆಯೋಜಿಸಲಾಗಿದ್ದು ಸರಿಯಷ್ಟೆ. ಸದರಿ ಸಭೆಯನ್ನು ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯದ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲ ಅವರ ಸೂಚನೆ ಮೇರೆಗೆ ಮುಂದೂಡಲಾಗಿದೆ. ಸದರಿ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಹೇಳಿದ್ದಾರೆ.
ಇನ್ನೂ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಅಸಮಾಧಾನ ಕೊತಕೊತ ಕುದಿಯುತ್ತಿದ್ದಾರೆ ಇತ್ತ ಆಡಳಿತ ಪಕ್ಷ ಕಾಂಗ್ರೆಸ್ ಮನೆಯಲ್ಲಿ ನಿಧಾನವಾಗಿ ಡಿನ್ನರ್ ಪೊಲಿಟಿಕ್ಸ್ ಜೋರಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ಇತ್ತೀಚೆಗೆ ನಡೆದಿದ್ದ ಡಿನ್ನರ್ ಮೀಟಿಂಗ್ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.