ಇಸ್ರೋದ ನೂತನ ಅಧ್ಯಕ್ಷರಾಗಿ ವಿ ನಾರಾಯಣನ್ ನೇಮಕ: ಯಾರಿವರು?

0
Spread the love

ನವದೆಹಲಿ:- ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಗೆ ಹೊಸ ಅಧ್ಯಕ್ಷರನ್ನಾಗಿ ಹಿರಿಯ ವಿಜ್ಞಾನಿ ಡಾ.ವಿ.ನಾರಾಯಣನ್‌ ಅವರನ್ನು ನೇಮಿಸಲಾಗಿದೆ. ಈ ಸಂಬಂಧ ಮಂಗಳವಾರ ಅಧಿಸೂಚನೆ ಹೊರಬಿದ್ದಿದೆ.

Advertisement

ಸಂಪುಟ ನೇಮಕಾತಿ ಸಮಿತಿಯು ಹೊರಡಿಸಿರುವ ಅಧಿಕೃತ ಆದೇಶದ ಪ್ರಕಾರ ನಾರಾಯಣನ್ ಅವರು ಮುಂದಿನ ಎರಡು ವರ್ಷಗಳ ಅವಧಿಗೆ ಇಸ್ರೋ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ. ನೇಮಕಾತಿ ಆದೇಶಕ್ಕೆ ಸಂಪುಟ ಕಾರ್ಯದರ್ಶಿ ಮನಿಶಾ ಸಸ್ಸೇನಾ ಸಹಿ ಮಾಡಿದ್ದಾರೆ.

ಹಾಲಿ ಅಧ್ಯಕ್ಷ ಎಸ್​​.ಸೋಮನಾಥ್ ಅವರ ಉತ್ತರಾಧಿಕಾರಿಯಾಗಿ ನಾರಾಯಣನ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಜನವರಿ 14 ರಿಂದ ಭಾರತೀಯ ಬಾಹ್ಯಾಕಾಶ ಸಂಸ್ಥೆಯು ನೂತನ ಮುಖ್ಯಸ್ಥರನ್ನು ಪಡೆಯಲಿದೆ.

ಆಯ್ಕೆ ಬೆನ್ನಲ್ಲೇ ತಿರುವನಂತಪುರಂನಲ್ಲಿ ಪ್ರತಿಕ್ರಿಯಿಸಿರುವ ಇಸ್ರೋದ ನೂತನ ಮುಖ್ಯಸ್ಥರು, ಭಾರತಕ್ಕಾಗಿ ನಾವು ಸ್ಪಷ್ಟ ಮಾರ್ಗಸೂಚಿಯನ್ನು ಹೊಂದಿದ್ದೇವೆ. ನಮ್ಮಲ್ಲಿ ಉತ್ತಮ ಪ್ರತಿಭೆಗಳಿರೋದ್ರಿಂದ ಇಸ್ರೋವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ಭರವಸೆ ಇದೆ ಎಂದು ನಾರಾಯಣನ್ ಹೇಳಿದ್ದಾರೆ.

ಪ್ರಸ್ತುತ ನಾರಾಯಣನ್ ಉನ್ನತ ಶ್ರೇಣಿಯ ಹಿರಿಯ ವಿಜ್ಞಾನಿ ಆಗಿರುವ ಅವರು, ಇಸ್ರೋದ ನಿರ್ದೇಶಕರಲ್ಲಿ ಒಬ್ಬರು. ಇಸ್ರೋದಲ್ಲಿ ಅವರು LPSC ನ ಮುಖ್ಯಸ್ಥರಾಗಿ ಮುನ್ನಡೆಸುತ್ತಿದ್ದಾರೆ. ಅಂದ್ಹಾಗೆ ಇವರ ಊರು ತಮಿಳುನಾಡಿನ ಕನ್ಯಾಕುಮಾರಿ. ತಮಿಳು ಮಾಧ್ಯಮದಲ್ಲಿ ಬಾಲ್ಯದ ಶಿಕ್ಷಣವನ್ನು ಪಡೆದುಕೊಂಡರು. ನಂತರ Cryogenic Engineering ವಿಭಾಗದಲ್ಲಿ M Tech ಪದವಿ ಪಡೆದುಕೊಂಡರು. ಐಐಟಿ ಏರೋಸ್ಪೇಸ್​ ಎಂಜಿನಿಯರಿಂಗ್​​ನಲ್ಲಿ ಪಿಹೆಚ್​ಡಿ ಪಡೆದುಕೊಂಡಿದ್ದಾರೆ. ಎಂಟೆಕ್​ ಪ್ರೋಗ್ರಾಮ್​​ನಲ್ಲಿ ಸಿಲ್ವರ್ ಮೆಡಲ್ ಗೌರವಕ್ಕೆ ಪಾತ್ರರಾಗಿದ್ದಾರೆ.


Spread the love

LEAVE A REPLY

Please enter your comment!
Please enter your name here