ವಿಜಯಸಾಕ್ಷಿ ಸುದ್ದಿ, ಧಾರವಾಡ: ಗ್ಯಾರಂಟಿ ಯೋಜನೆಗಳಿಂದ ಬಡ ಜನರಿಗೆ ಅನುಕೂಲವಾಗಿದೆ. ಈ ಯೋಜನೆಯಿಂದ ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿಗಳಾಗಿ ಸ್ವಂತ ಉದ್ಯೋಗ, ಟೇಲರಿಂಗ್ ಇತರೆ ಉದ್ಯೋಗ ಮಾಡುತ್ತಿದ್ದಾರೆ ಎಂದು ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ಅವರು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯ ವಿಧಾನಗಳು ಹಾಗೂ ಪರಿಣಾಮಕಾರಿಯಾಗಿ ಜಾರಿಗೊಳಿಸುವ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಯ ಬಗ್ಗೆ ನಗರ ಹಾಗೂ ಗ್ರಾಮಗಳಲ್ಲಿ ಹೆಚ್ಚಿನ ಪ್ರಚಾರ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಹಾಗೂ ಯುವ ನಿಧಿ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದೆ. ಹೆಚ್ಚು ಪ್ರಚಾರ ಮಾಡುವ ಕುರಿತು ಕರಪತ್ರಗಳ ಬಿಡುಗಡೆ ಮಾಡಿ ಚಾಲನೆ ನೀಡಿದರು.
ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ಮಾತನಾಡಿ, ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ಪದವಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ಯುವನಿಧಿ ಯೋಜನೆಯ ಬಗ್ಗೆ ಹೆಚ್ಚಿನ ಪ್ರಚಾರ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಪ್ರಾಧಿಕಾರದ ಉಪಾಧ್ಯಕ್ಷ ಅರವಿಂದ ಏಗನಗೌಡರ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರುಗಳಾದ ಮುರಗಯ್ಯಾ ವಿರಕ್ತಮಠ, ಅಬ್ದುಲ್ ರಶೀದ ಬೋಳಾಬಾಯಿ, ರತ್ನಾ ತೇಗೂರಮಠ ಮಾತನಾಡಿದರು. ಸಭೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಸದಸ್ಯರು ಉಪಸ್ಥಿತರಿದ್ದರು.


