ದಾವಣಗೆರೆ:- ಡಿನ್ನರ್ ಪಾಲಿಟಿಕ್ಸ್‌ನಲ್ಲಿ ಬ್ಯುಸಿ ಇರುವ ಕಾಂಗ್ರೆಸ್ ಸರ್ಕಾರ ಹೆಚ್ಚು ದಿನ ಉಳಿಯಲ್ಲ ಎಂದು ಬಿಜೆಪಿ ಮುಖಂಡ MP ರೇಣುಕಾಚಾರ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಡಿನ್ನರ್ ಪಾಲಿಟಿಕ್ಸ್‌ನಲ್ಲಿ ಬ್ಯುಸಿಯಾಗಿರುವ ಕಾಂಗ್ರೆಸ್ ಸರ್ಕಾರ ಏಪ್ರಿಲ್‌ನಲ್ಲಿ ಬೀಳಲಿದೆ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಸರ್ಕಾರ ಬೀಳುವುದು ಅಷ್ಟೇ ಸತ್ಯ ಎಂದರು.
ಗ್ಯಾರಂಟಿ ಹೆಸರು ಹೇಳಿಕೊಂಡು ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಸರ್ಕಾರ ಹಣ ಹೊಂದಿಸಲು ಪರದಾಡುತ್ತಿದೆ. ಶಾಸಕರು ಖರ್ಚಿಗಾಗಿ ಹಾದಿ ಬೀದಿಯಲ್ಲಿ ಕಿತ್ತಾಡುತ್ತಿದ್ದಾರೆ. ಪ್ರತ್ಯೇಕವಾಗಿ ಅವರವರ ಬಣದ ಡಿನ್ನರ್ ಪಾರ್ಟಿ ಮಾಡಿಕೊಳ್ಳುತ್ತಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರದಲ್ಲಿ 60% ಕಮಿಷನ್ ದಂಧೆ ನಡೆಯುತ್ತಿದೆ. ಕಮಿಷನ್ ಅರೋಪಕ್ಕೆ ಸಿಎಂ ದಾಖಲೆ ಬಿಡುಗಡೆ ಮಾಡಿ ಎಂದು ಹೇಳಿದ್ದಾರೆ. ಓತಿಕ್ಯಾತಕ್ಕೆ ಬೇಲಿ ಸಾಕ್ಷಿ ಎನ್ನುವಂತಾಗಿದೆ ಇವರು ಹೇಳುವ ಮಾತು. ರಾಜ್ಯದ ಜನರು ನಿಮ್ಮ ಅಂಗಿ ಹರಿತಾರೆ, ವಿಧಾನಸೌಧದ ಮೂರನೇ ಮಹಡಿಯಲ್ಲಿ ಕೂರಲು ಬಿಡುವುದಿಲ್ಲ ಎಂದು MP ರೇಣುಕಾಚಾರ್ಯ ಆಕ್ರೋಶ ಹೊರಹಾಕಿದ್ದಾರೆ.