ಬೆಂಗಳೂರು :- ಎರಡು ತಿಂಗಳ ಹಿಂದಷ್ಟೇ ಮದುವೆಯಾಗಿದ್ದ ಪೇದೆಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಆಸ್ಟಿನ್ ಟೌನ್‍ನಲ್ಲಿ ಜರುಗಿದೆ.
ಬಳ್ಳಾರಿ ಮೂಲದ ಗೋವಿಂದ.ಕೆ ಆತ್ಮಹತ್ಯೆಗೆ ಶರಣಾದ ಪೇದೆ. ಅವರು ಎರಡು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದರು. ಕೌಟುಂಬಿಕ ಕಲಹದಿಂದ ಬೇಸತ್ತು ನಗರದ ಕ್ವಾಟ್ರಸ್‍ನಲ್ಲಿರುವ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಶಂಕಿಸಲಾಗಿದೆ.
ಘಟನೆ ಸಂಬಂಧ ವಿವೇಕ ನಗರ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ.



