ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ: ಡಿ.ಕೆ. ಶಿವಕುಮಾರ್

0
Spread the love

ಬೆಂಗಳೂರು: ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ನೀವು ಸಿಎಂ ಆಗುತ್ತೀರಿ ಎಂಬ ವಿನಯ್ ಗುರೂಜಿ ಅವರ ಹೇಳಿಕೆ ಬಗ್ಗೆ ನಗರದಲ್ಲಿ ಮಾತನಾಡಿದ ಅವರು, ಮ್ಮ ಸರ್ಕಾರ ಸುಭದ್ರವಾಗಿದ್ದು, ಯಾವುದೇ ಸ್ವಾಮೀಜಿಗಳು ನಮ್ಮ ಸರ್ಕಾರದ ಬಗ್ಗೆ ಭವಿಷ್ಯ ನುಡಿಯುವುದು ಬೇಡ ಎಂದು ಮನವಿ ಮಾಡುತ್ತೇನೆ.

Advertisement

ಸಿದ್ದರಾಮಯ್ಯ ಅವರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ” ಎಂದು ತಿಳಿಸಿದರು. ಪವರ್ ಶೇರಿಂಗ್ ಬಗ್ಗೆ ಚರ್ಚೆ ಆಗುತ್ತಿರುವಾಗ ಈ ಹೇಳಿಕೆ ಬಂದಿದೆ ಎಂದು ಕೇಳಿದಾಗ, “ಯಾವ ಪವರ್ ಇಲ್ಲ, ಶೇರು ಇಲ್ಲ. ಐದು ವರ್ಷ ಕಾಂಗ್ರೆಸ್ ಸರ್ಕಾರ ಇರುತ್ತದೆ” ಎಂದರು.

ಸಂಪುಟ ಸಭೆಯಲ್ಲಿ ಜಾತಿ ಗಣತಿ ಚರ್ಚೆ

ಜಾತಿ ಗಣತಿ ವಿರೋಧಿಸಿ ಒಕ್ಕಲಿಗ ಹಾಗೂ ಲಿಂಗಾಯತ ನಾಯಕರ ಸಭೆ ನಡೆಯುವುದೇ ಎಂದು ಕೇಳಿದಾಗ, “ನನಗೆ ಗೊತ್ತಿರುವ ಮಾಹಿತಿ ಪ್ರಕಾರ ಈ ಬಗ್ಗೆ ಯಾವುದೇ ಸಭೆ ಇಲ್ಲ. ಅದರ ಅಗತ್ಯವಿಲ್ಲ. ಮುಖ್ಯಮಂತ್ರಿಗಳು ಈ ವಿಚಾರವನ್ನು ಸಚಿವ ಸಂಪುಟದಲ್ಲಿ ಪ್ರಸ್ತಾಪಿಸುವುದಾಗಿ ಹೇಳಿದ್ದು, ಅಲ್ಲಿ ನಾವು ಚರ್ಚೆ ಮಾಡುತ್ತೇವೆ” ಎಂದು ತಿಳಿಸಿದರು.

ನಾನು, ಸಿಎಂ ಚರ್ಚಿಸಿ ಸಿಎಲ್ ಪಿ ಸಭೆ

13ರಂದು ಕರೆಯಲಾಗುವ ಸಿಎಲ್ ಪಿ ಸಭೆ ಬಗ್ಗೆ ಕೇಳಿದಾಗ, “ನಾನು ಹಾಗೂ ಸಿಎಂ ಚರ್ಚೆ ಮಾಡಿಯೇ ಕರೆದಿದ್ದೇವೆ. ಅಂದು ಇಡೀ ದಿನ ಪಕ್ಷಕ್ಕೆ ಮುಡಿಪಾಗಿಡಬೇಕು ಎಂದು ಹೇಳಿ, ಅಂದಿನ ಕಾರ್ಯಕ್ರಮ ರದ್ದು ಮಾಡಿದ್ದೇವೆ. ಬೆಳಗ್ಗೆ 11 ಗಂಟೆಗೆಭಾರತ ಜೋಡೋ ಭವನದಲ್ಲಿ ಬ್ಲಾಕ್, ಜಿಲ್ಲಾ ಅಧ್ಯಕ್ಷರ ಸಭೆ ಕರೆಯಲಾಗಿದೆ.

ಸಂಜೆ 4 ಗಂಟೆಗೆ ಪದಾಧಿಕಾರಿಗಳ ಸಭೆ ಕರೆದಿದ್ದೇವೆ. ಸಂಜೆ 6 ಗಂಟೆಗೆ ಶಾಸಕರು, ಸಚಿವರ ಸಭೆ ಮಾಡಿ ಜವಾಬ್ದಾರಿ ನೀಡಲಾಗುವುದು. 14ರಂದು ನಾನು ಹಾಗೂ ಸಿಎಂ ದೆಹಲಿಗೆ ತೆರಳಲಿದ್ದು, 15ರಂದು ದೆಹಲಿಯಲ್ಲಿ ಕಾಂಗ್ರೆಸ್ ನೂತನ ಕಚೇರಿ ಉದ್ಘಾಟನೆ ಮಾಡಲಾಗುವುದು” ಎಂದು ತಿಳಿಸಿದರು.


Spread the love

LEAVE A REPLY

Please enter your comment!
Please enter your name here