ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ಹೋರಾಟ ಮಾಡಲೇಬೇಕು: ಡಿಸಿಎಂ ಡಿ.ಕೆ.ಶಿವಕುಮಾರ್

0
Spread the love

ಬೆಂಗಳೂರು: “ಕೇಂದ್ರದ ಬಳಿ ನಮ್ಮ ತೆರಿಗೆ ನಮ್ಮ ಹಕ್ಕಿಗಾಗಿ ನಾವು ಹೋರಾಟ ಮಾಡಲೇ ಬೇಕು. ನಮ್ಮ ರಾಜ್ಯದ ಹಿತವನ್ನು ಕಾಪಾಡಲೇಬೇಕು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು.

Advertisement

ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮುಂದುವರೆಯಲಿದೆಯೇ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, “ಬಿಜೆಪಿಯ ಇಷ್ಟೊಂದು ಜನ ಸಂಸದರು ಏಕೆ ಮೌನವಾಗಿ ಇದ್ದಾರೆ ಎಂಬುದು ನನಗೆ ಅರ್ಥವಾಗುತ್ತಿಲ್ಲ” ಎಂದು ವಿಷಾದ ವ್ಯಕ್ತಪಡಿಸಿದರು.

“ನೀರಾವರಿ ಮತ್ತು ನಗರಾಭಿವೃದ್ಧಿಗೆ ನೀಡುವ ಅನುದಾನದ ವಿಚಾರದಲ್ಲಿ ಕೇಂದ್ರ ಸರ್ಕಾರ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ರಾಜ್ಯದ ಪಾಲಿನ ತೆರಿಗೆ ಅನ್ಯಾಯವನ್ನು ಕಾನೂನಾತ್ಮಕವಾಗಿ ಹೇಗೆ ಎದುರಿಸಬೇಕು ಎಂಬುದನ್ನು ನಮ್ಮ ಮುಖ್ಯಮಂತ್ರಿಗಳು ಅಧ್ಯಯನ ಮಾಡುತ್ತಿದ್ದಾರೆ. ರಾಜ್ಯ ಬಜೆಟ್ ಮಂಡನೆ ವೇಳೆಗೆ ಈ ಅಸಮಾನ ಹಂಚಿಕೆಗೆ ನಾವು ಉತ್ತರ ಕೊಡುತ್ತೇವೆ” ಎಂದು ಹೇಳಿದರು.


Spread the love

LEAVE A REPLY

Please enter your comment!
Please enter your name here