ಚಿತ್ರದುರ್ಗ: ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ, ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಈ ಸರ್ಕಾರ ಸಂಪೂರ್ಣ ಭ್ರಷ್ಟರ ರಕ್ಷಣೆ ಮಾಡುತ್ತಿದೆ.
Advertisement
ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ನಾನು ಸಿಎಂ, ನೀನು ಸಿಎಂ ಆಗಬೇಕೆಂಬ ಪರಿಸ್ಥಿತಿ ಇದೆ. ಯಾರೂ ಊಟಕ್ಕೂ ಸೇರುವ ಸ್ವತಂತ್ರ ಇಲ್ಲ. ಒಡೆದು ಆಳುವ ನೀತಿ ರಾಜ್ಯದಲ್ಲಿದೆ ಎಂದು ಹೇಳಿದರು.
ಇನ್ನೂ ದಲಿತ ಮಾಫಿಯಾ ಕಾಂಗ್ರೆಸ್‌ನಲ್ಲಿದೆ. ದಲಿತ ವಿರೋಧಿ ಸರ್ಕಾರವಿದು. ಕಾಂಗ್ರೆಸ್ ಕೆಲ ಕುಟುಂಬಗಳ ಹಿಡಿತದಲ್ಲಿದೆ. ಖರ್ಗೆ, ಮುನಿಯಪ್ಪ, ಹೆಚ್.ಸಿ ಮಹದೇವಪ್ಪನ ಕುಟುಂಬಗಳು ಕಾಂಗ್ರೆಸ್‌ನಲ್ಲಿ ಹಿಡಿತ ಸಾಧಿಸಿವೆ. ಇತರರಿಗೆ ಅವಕಾಶವೇ ಇಲ್ಲದಂತಾಗಿದೆ. ಇವರನ್ನು ಹೊರತುಪಡಿಸಿ ಯಾರು ಸಹ ಸಿಎಂ ಆಗಬಾರದೆಂಬ ಮಾಫಿಯಾವಿದೆ ಎಂದು ಆರೋಪಿಸಿದ್ದಾರೆ.