ಚಿಕ್ಕಮಗಳೂರು: ಅಶ್ಲೀಲ ಹೇಳಿಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿದೆ. ಇದೀಗ ಬಿಜೆಪಿ ಎಂಎಲ್ಸಿ ಸಿಟಿ ರವಿ ಅವರಿಗೆ ಅನಾಮಧೇಯ ವ್ಯಕ್ತಿಯಿಂದ ಜೀವ ಬೆದರಿಕೆ ಬಂದಿದೆ. ಹೌದು ಸಿ.ಟಿ ರವಿ ಸ್ವಗೃಹಕ್ಕೆ ಅನಾಮಧೇಯ ವ್ಯಕ್ತಿಗಳು ಪತ್ರ ಕಳುಹಿಸಿದ್ದಾರೆ.
ಪತ್ರದಲ್ಲಿ ಇನ್ನೂ 15 ದಿನದೊಳಗೆ ಚಿಕ್ಕಮಗಳೂರಿನಿಂದ ಬೆಳಗಾವಿಗೆ ಬಂದು ಅಭಿನೇತ್ರಿಯ ಕೈಕಾಲು ಹಿಡಿದು ಕ್ಷಮೆ ಕೇಳಬೇಕು. ಇಲ್ಲದಿದ್ದರೆ ನಿಮ್ಮ ಮನೆಗೆ ನುಗ್ಗಿ ನಿಮ್ಮ ಕೈಕಾಲ ಮುರಿದು ಸಾಯಿಸುತ್ತೇವೆ. ನಿನ್ನ ಕೈ ಕಾಲು ಮುರಿಯುತ್ತೇವೆ, ಪ್ರಾಣ ತೆಗೆಯುತ್ತೇವೆ ಹಾಗೂ ನಿನ್ನ ಮಗನನ್ನೂ ಸಾಯಿಸುತ್ತೇವೆ.
ಹುಷಾರ್… ಹುಷಾರ್… ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು ಸಿ.ಟಿ ರವಿ ಅವರು ಚಿಕ್ಕಮಗಳೂರು ನಗರದ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.