ವಿಜಯಪುರ: ಸಿಟಿ ರವಿ, ಚಕ್ರವರ್ತಿ ಸೂಲಿಬೆಲೆ ಅವರನ್ನ ಕೆಲವರು ಟಾರ್ಗೆಟ್ ಮಾಡಿದ್ದಾರೆ ಎಂದು ವಿಜಯಪುರ ಶಾಸಕ ಬಸನಗೌಡ ಪಟೀಲ್ ಯತ್ನಾಳ್ ಅವರು ಆರೋಪಿಸಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಬೆದರಿಕೆ ಪತ್ರ ಬಂದಿರುವ ವಿಚಾರವಾಗಿ ನಗರದಲ್ಲಿ ಮಾತನಾಡಿದ ಅವರು,
ಸಿಟಿ ರವಿ, ಚಕ್ರವರ್ತಿ ಸೂಲಿಬೆಲೆ ಅವರನ್ನ ಕೆಲವರು ಟಾರ್ಗೆಟ್ ಮಾಡಿದ್ದಾರೆ. ಸಿಟಿ ರವಿ ಅವರನ್ನು ಇಡೀ ರಾತ್ರಿ ಪೊಲೀಸರು ಸುತ್ತಾಡಿಸುತ್ತಾರೆ. ಇಡೀ ರಾತ್ರಿ ಪೊಲೀಸ್ ಅಧಿಕಾರಿಗಳು ಯಾರ ಜೊತೆ ಫೋನ್‌ನಲ್ಲಿ ಮಾತನಾಡುತ್ತಿದ್ದರು? ರಾಜ್ಯದಲ್ಲಿ ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಯತ್ನಾಳ್ ಕಿಡಿಕಾರಿದ್ದಾರೆ.
ಬಿಜೆಪಿಯ ಮಾಜಿ ಶಾಸಕರ ಸಭೆ ವಿಚಾರವಾಗಿ ಮಾತನಾಡಿದ ಅವರು, ನಿನ್ನೆ 17 ಜನರು ನನಗೆ ಕರೆ ಮಾಡಿದ್ದರು. ನಾವು ಯಾರು ಆತ್ಮ ಸಾಕ್ಷಿಯಾಗಿ ಹೋಗಿಲ್ಲ. ರಾಜ್ಯಾಧ್ಯಕ್ಷ ಹುದ್ದೆಯಲ್ಲಿರುವ ಕಾರಣದಿಂದ ಹೊಗಿದ್ದೇವೆ. ನಾವು ಪಕ್ಷದ ವಿರುದ್ದ ಹೋಗಿಲ್ಲ.
ಅವರ ಸಭೆ ಕರೆದಿರುವ ಬಗ್ಗೆ ನಮ್ಮದೇನು ವಿರೋಧವಿಲ್ಲ. ಅವರೆಲ್ಲ ಮಾಜಿಗಳು ಆಗಲು ಕಾರಣರು ಯಾರು. ಅದು ಆತ್ಮಾವಲೋಕನ ಅಲ್ಲಿ ಆಗಬೇಕಿತ್ತು. ಅವರೆಲ್ಲ ಆಯ್ಕೆ ಆಗಿದ್ದರೆ ನಮ್ಮ ಸರ್ಕಾರ ಇರುತಿತ್ತು. ಅವರನ್ನೆಲ್ಲಾ ಸೋಲಿಸಿದ ಕಾಣದ ಕೈಗಳು ಯಾವವು? ಆ ಕೈಗಳು ಎರಡೋ, ನಾಲ್ಕು ಅನ್ನೋದು ಚರ್ಚೆ ಆಗಿದ್ದರೆ, ಈಗ ಅವರಿಗೆ ಸಾಂತ್ವನ ಹೇಳುತ್ತಿದ್ದಾರೆ ಎಂದಿದ್ದಾರೆ.