ಬೆಂಗಳೂರು:- ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಹಸುವಿನ ಕೆಚ್ಚಲು ಕೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಹಸು ಮಾಲೀಕನಿಗೆ ಬಿಜೆಪಿ ಸಂಸದ ಪಿಸಿ ಮೋಹನ್ ಅವರು 2 ಹಸು, 1 ಕರು ನೀಡಿದ್ದಾರೆ.
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಶನಿವಾರ ರಾತ್ರಿ ರಸ್ತೆಯಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲನ್ನು ಕೊಯ್ದು ದುಷ್ಕರ್ಮಿಗಳು ದುಷ್ಕೃತ್ಯ ಮೆರೆದಿದ್ದರು. ಕೂಡಲೇ ಮಾಹಿತಿ ತಿಳಿದು ಘಟನಾ ಸ್ಥಳಕ್ಕೆ ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದ ಪಿಸಿ ಮೋಹನ್ ಆಗಮಿಸಿ ಪೊಲೀಸರಿಗೆ ಕ್ಲಾಸ್ ತೆಗೆದುಕೊಂಡಿದ್ದರು. ಅಲ್ಲದೇ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು.
ಇದೀಗ ಸಂಸದ ಪಿಸಿ ಮೋಹನ್ ಅವರು, ವಾದ್ಯಮೇಳಗಳ ಮೂಲಕ ನೂತನ 2 ಹಸು ಹಾಗೂ 1 ಕರುವನ್ನು ಹಸು ಮಾಲೀಕ ಕರ್ಣ ಅವರ ಮನೆಗೆ ತಲುಪಿಸಿದ್ದಾರೆ. ಹಸು ನೀಡುವ ಮುನ್ನ, ಹಸು ಹಾಗೂ ಕರುವಿಗೆ ಚಾಮರಾಜಪೇಟೆಯ ಮಾರಿಯಮ್ಮ ದೇವಾಲಯದಲ್ಲಿ ಪೂಜೆ ಸಲ್ಲಿಸಿಸಲಾಯಿತು. ಬಳಿಕ ಹಸುವನ್ನು ಕರ್ಣ ಅವರ ಸುಪರ್ದಿಗೆ ನೀಡಲಾಗಿದೆ.