ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಾರು ಅಪಘಾತ: ತಪ್ಪಿದ ಅನಾಹುತ, ಕೂದಲೆಳೆ ಅಂತರದಲ್ಲಿ ಬಚಾವ್!

0
Spread the love

ಬೆಳಗಾವಿ:- ಸಂಕ್ರಾಂತಿ ಹಬ್ಬದ ದಿನವೇ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡಿದೆ.

Advertisement

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಬಳಿ ಮರಕ್ಕೆ ಕಾರು ಗುದ್ದಿ ಈ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಅವಘಡ ಸಂಭವಿಸಿಲ್ಲ.

ಅಪಘಾತದಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಆದರೆ, ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಯಾರಿಗೂ ಗಂಭೀರ ಗಾಯಗಳಾಗಿಲ್ಲ ಎನ್ನುವ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಚಿವೆ ಹೆಬ್ಬಾಳ್ಕರ್ ಅವರನ್ನು ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.

ದಾರಿಯಲ್ಲಿ ಕಾರಿಗೆ ನಾಯಿಯೊಂದು ಅಡ್ಡ ಬಂದಿದೆ. ಅದಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನ ಮಾಡಿದಾಗ ಕಾರು ರಸ್ತೆ ಬದಿಯಲ್ಲಿದ್ದ ಮರಕ್ಕೆ ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಅದೃಷ್ಟಕ್ಕೆ ಕಾರಿನೊಳಗಿದ್ದವರಿಗೆ ಯಾವ ಪ್ರಾಣಾಪಾಯವಾಗಿಲ್ಲ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here