ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಸಹೋದರ ಕಾರು ಅಪಘಾತ: ಮಗ ಮೃಣಾಲ್ ಹೇಳಿದ್ದೇನು..?

0
Spread the love

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿರುವುದು ತಿಳಿದುಬಂದಿದೆ. ಇನ್ನೂ ಈ ವಿಚಾರವಾಗಿ ಮಗ ಮೃಣಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ.

Advertisement

ನಗರದಲ್ಲಿ ಮಾತನಾಡಿದ ಅವರು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಿಧಾನ ಪರಿಷತ್ ಸದಸ್ಯ ಹಾಗೂ ಸಹೋದರನಿಗೆ ಗಂಭೀರಸ್ವರೂಪದ ಗಾಯಗಳೇನೂ ಅಗಿಲ್ಲ, ಸಚಿವೆಯ ಬೆನ್ನುಮೂಳೆಗೆ ಗಾಯವಾಗಿದೆ, ಬೆಳಗಾವಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವರೆಂದು ಹೇಳಿದರು.

ಇನ್ನೂ ನಿನ್ನೆ ಬೆಂಗಳೂರಲ್ಲಿ ಕೆಪಿಸಿಸಿ ಸರ್ವ ಸದಸ್ಯರ ಸಭೆ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡ ಸಚಿವೆ ತಮ್ಮ ಕ್ಷೇತ್ರಕ್ಕೆ ವಾಪಸ್ಸಾಗುತ್ತಿದ್ದಾಗ ಅಪಘಾತ ಜರುಗಿದೆ ಎಂದು ತಿಳಿದು ಬಂದಿದೆ.


Spread the love

LEAVE A REPLY

Please enter your comment!
Please enter your name here