Home Karnataka News ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ವರುಣನ ಆಗಮನ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು!

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ವರುಣನ ಆಗಮನ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು!

0
ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದು ವರುಣನ ಆಗಮನ: ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ತುಂತುರು ಮಳೆ ಶುರು!
Spread the love

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರು ಸೇರಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಇಂದು ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು, ತುಂತುರು ಮಳೆ ಶುರುವಾಗಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆಯಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನ ಎಚ್​ಎಎಲ್​ನಲ್ಲಿ 29.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 26.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 30.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here