ಮುಂಬರುವ ದಿನಗಳಲ್ಲಿ ಪ್ರದರ್ಶನಕ್ಕೆ ತಕ್ಕಂತೆ ವೇತನ ನೀಡುವ ನಿರ್ಧಾರಕ್ಕೆ ಬಂದಿರುವ BCCI, ಟೀಮ್ ಇಂಡಿಯಾ ಆಟಗಾರರಿಗೆ ಬಿಸಿ ಮುಟ್ಟಿಸಲು ಪ್ಲ್ಯಾನ್ ಮಾಡಿದೆ.
Advertisement
ಈ ಬಗ್ಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ, ಕೋಚ್ ಗೌತಮ್ ಗಂಭೀರ್ ಅವರೊಂದಿಗೆ ಬಿಸಿಸಿಐ ಪರಿಶೀಲನಾ ಸಭೆ ನಡೆಸಿದೆ. ಈ ಸಭೆಯಲ್ಲಿ ಆಟಗಾರರ ವೇತನ ಕಡಿತದ ಬಗ್ಗೆಯೂ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.
ಟೀಮ್ ಇಂಡಿಯಾ ಆಟಗಾರರಿಗೆ ಅವರ ಪ್ರದರ್ಶನಕ್ಕೆ ಅನುಗುಣವಾಗಿ ಸಂಭಾವನೆ ನೀಡುವ ಬಗ್ಗೆ ಬಿಸಿಸಿಐ ಅಧಿಕಾರಿಗಳು ಚರ್ಚಿಸಿದ್ದಾರೆ. ಅಂದರೆ ಚೆನ್ನಾಗಿ ಆಡಿದರೆ ಮಾತ್ರ ಉತ್ತಮ ಸಂಭಾವನೆ ಪಡೆಯಲಿದ್ದಾರೆ. ಇಲ್ಲದಿದ್ದರೆ ವೇತನ ಕಡಿತವಾಗಲಿದೆ.
ಆಟಗಾರರನ್ನು ಜವಾಬ್ದಾರಿಯುತ ಸ್ಥಾನದಲ್ಲಿರಿಸಲು ಇಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲು ಬಿಸಿಸಿಐ ಚರ್ಚೆ ನಡೆಸಿದ್ದು, ಈ ಮೂಲಕ ವಿಶ್ವ ಕ್ರಿಕೆಟ್ನಲ್ಲಿ ಭಾರತ ತಂಡದ ಪ್ರಾಬಲ್ಯವನ್ನು ಕಾಪಾಡಿಕೊಳ್ಳಲು ಚಿಂತಿಸಲಾಗಿದೆ.