ಸಾಕ್ಷ್ಯಾಧಾರಗಳಿಲ್ಲದೆ ಡ್ರಗ್ಸ್ ಕೇಸ್ʼನಲ್ಲಿ ದೋಷಮುಕ್ತರಾದ ನಟಿ ರಾಗಿಣಿ ದ್ವಿವೇದಿ!

0
Spread the love

ಬೆಂಗಳೂರು: ಡ್ರಗ್ಸ್​ ಜಾಲದೊಂದಿಗೆ ನಂಟು ಹೊಂದಿದ್ದಾರೆ ಎಂಬ ಆರೋಪದಲ್ಲಿ ಬಂಧನಕ್ಕೊಳಗಾಗಿ ಬಿಡುಗಡೆಯಾಗಿದ್ದ ಸ್ಯಾಂಡಲ್​ವುಡ್ ನಟಿ ರಾಗಿಣಿ ದ್ವಿವೇದಿ ಮತ್ತು ಪ್ರಶಾಂತ್ ರಂಕ ವಿರುದ್ಧ ಬೆಂಗಳೂರಿನ ಕಾಟನ್‌ಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

Advertisement

ಡ್ರಗ್ಸ್ ಮಾಫಿಯಾದೊಂದಿಗೆ ನಂಟು ಹೊಂದಿದ ಆರೋಪ ರಾಗಿಣಿ ಮೇಲೆ ಇತ್ತು. ಪಾರ್ಟಿ ಆಯೋಜಿಸಿ ಡ್ರಗ್ಸ್ ಬಳಕೆಗೂ ಅವರು ಅವಕಾಶ ಮಾಡಿಕೊಟ್ಟಿದ್ದರು ಎನ್ನಲಾಗಿತ್ತು. ಈ ಕಾರಣಕ್ಕೆ ಎನ್​ಡಿಪಿಎಸ್ ಆ್ಯಕ್ಟ್ ಅಡಿಯಲ್ಲಿ ಅವರ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ ನಟಿಯ ವಿರುದ್ಧ ಯಾವುದೇ ಸಾಕ್ಷ್ಯ ಸಿಗದ ಕಾರಣ ರಾಗಿಣಿ ನಿರಪರಾಧಿ ಎಂಬುದು ಸಾಬೀತಾಗಿದೆ.

ಕೇವಲ ಸಹ ಆರೋಪಿಗಳ ಹೇಳಿಕೆ ಆಧರಿಸಿ ರಾಗಿಣಿ ವಿರುದ್ಧ ಕೇಸ್ ದಾಖಲಿಸಲಾಗಿತ್ತು. ಆದರೆ, ಯಾವುದೇ ಸಾಕ್ಷ್ಯಗಳನ್ನು ಒದಗಿಸಿಲ್ಲ ಎಂದು ರಾಗಿಣಿ ಪರ ವಕೀಲ ಎ. ಮೊಹಮ್ಮದ್ ತಾಹಿರ್ ವಾದ ಮಾಡಿದ್ದರು. ಈ ವಾದವನ್ನು ಪರಿಣಿಸಿದ ನ್ಯಾಮೂರ್ತಿ ಹೇಮಂತ್ ಚಂದನ್ ಗೌಡರ್ ಅವರ ನೇತೃತ್ವದ ಹೈಕೋರ್ಟ್ ಏಕಸದಸ್ಯ ಪೀಠ ಪ್ರಕರಣ ರದ್ದುಪಡಿಸಿ ಆದೇಶ ಹೊರಡಿಸಿದೆ. ಎ 4 ಪ್ರಶಾಂತ್ ರಂಕಾ ವಿರುದ್ಧದ ಪ್ರಕರಣ ಕೂಡ ರದ್ದಾಗಿದೆ.


Spread the love

LEAVE A REPLY

Please enter your comment!
Please enter your name here