ಸಂಕ್ರಾಂತಿ ವಿಶೇಷ: ಜ್ಯೋತಿ ರೂಪದಲ್ಲಿ ಭಕ್ತರಿಗೆ ದರ್ಶನ ಕೊಟ್ಟ ಅಯ್ಯಪ್ಪ!

0
Spread the love

ಶಬರಿಮಲೆ:- ಇಂದು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಅದರಂತೆ ಶಬರಿಮಲೆಯಲ್ಲೂ ಜ್ಯೋತಿ ರೂಪದಲ್ಲಿ ಅಯ್ಯಪ್ಪ ಸ್ವಾಮಿ ತನ್ನ ಭಕ್ತರಿಗೆ ದರ್ಶನ ಕೊಟ್ಟಿದ್ದಾನೆ.

Advertisement

ಅಯ್ಯಪ್ಪ ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಇಂದು ಸಂಜೆ 6:44ಕ್ಕೆ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ ದರ್ಶನ ಪಡೆದರು.

ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಮಕರ ಸಂಕ್ರಾಂತಿ ಪ್ರಯುಕ್ತ ವಿಶೇಷ ಪೂಜೆಗಳು ನಡೆದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಭಕ್ತರಿಗೆ ದರ್ಶನಕೊಟ್ಟಿದ್ದಾನೆ.

ಭಕ್ತ ಸಮೂಹದ ನಿರ್ವಹಣೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಮತ್ತು ಅದರ ಸುತ್ತಮುತ್ತ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು.


Spread the love

LEAVE A REPLY

Please enter your comment!
Please enter your name here