Sarigama Viji: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ನಿಧನ

0
Spread the love

ಕನ್ನಡ ಚಿತ್ರರಂಗ ಮತ್ತು ಟಿವಿ ಲೋಕದ ಜನಪ್ರಿಯ ನಟ ಸರಿಗಮ ವಿಜಿ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ನಿಧನರಾಗಿರುವ ವಿಚಾರವನ್ನು ಪುತ್ರ ರೋಹಿತ್‌ ಅಧಿಕೃತವಾಗಿ ತಿಳಿಸಿದ್ದಾರೆ. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು.

Advertisement

ಯಶಂಪುರದ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು ಬೆಳಿಗ್ಗೆ 9:45ಕ್ಕೆ ನಿಧನ ಹೊಂದಿದ್ದಾರೆ.

ಕಳೆದ ಕೆಲವು ದಿನಗಳಿಂದಲೂ ವಿಜಿ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೆಲವು ಸಿನಿಮಾ ನಟ-ನಟಿಯರು ವಿಜಿ ಅವರನ್ನು ದಾಖಲಿಸಿದ್ದ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿ ಅವರು ಗುಣವಾಗುತ್ತಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದ್ದರು

, ಆದರೆ ಅದು ಸುಳ್ಳಾಗಿದೆ. ಸತತ ಚಿಕಿತ್ಸೆ ಬಳಿಕ ಇದೀಗ ವಿಜಿ ಅವರು ನಿಧನ ಹೊಂದಿದ್ದಾರೆ. ಅವರಿಗೆ ಇಬ್ಬರು ಮಕ್ಕಳಿದ್ದರು. ನಾಳೆ (ಜನವರಿ 16) ಬೆಳಿಗ್ಗೆ 10 ರಿಂದ 12 ಗಂಟೆಗೆ ಅಷ್ಟ್ರಲ್ಲಿ ಚಾಮರಾಜಪೇಟೆಯ ಟಿ ಆರ್ ಮಿಲ್ ಬಳಿ ಬರುವ ಚೀತಾಗಾರದಲ್ಲಿ ಅಂತ್ಯ ಕ್ರಿಯೆ ನಡೆಯಲಿದೆ.

 

 


Spread the love

LEAVE A REPLY

Please enter your comment!
Please enter your name here