ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ. ಇತ್ತೀಚೆಗಷ್ಟೇ ಇವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹಾಗಾಗಿ ಕಳೆದ 4 ದಿನಗಳಿಂದ ಯಶವಂತಪುರದ ಬಳಿಯ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದರ ಮಧ್ಯೆ ನಟ ಸರಿಗಮ ವಿಜಿ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿತ್ತು. ಈಗ ಇವರು ಮೃತಪಟ್ಟಿದ್ದಾರೆ.
ಇನ್ನೂ ಜ.16ರಂದು ಅವರ ಅಂತ್ಯಕ್ರಿಯೆ ಬೆಂಗಳೂರಿನ ಚಾಮರಾಜಪೇಟೆಯ ಚಿತಾಗಾರದಲ್ಲಿ ನಡೆಯಲಿದೆ. ಯಶವಂತಪುರದ ಮಣಿಪಾಲ್ ಆಸ್ಪತ್ರೆಯಲ್ಲಿರುವ ಸರಿಗಮ ವಿಜಿ ಮೃತದೇಹವನ್ನು ಇಂದು ಮಧ್ಯಾಹ್ನ ಮಹಾಲಕ್ಷ್ಮಿ ಲೇಔಟ್‌ನಲ್ಲಿರುವ ನಟನ ನಿವಾಸಕ್ಕೆ ಶಿಫ್ಟ್ ಮಾಡಲಿದ್ದಾರೆ.
ಇನ್ನೂ ಜ.16ರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಸರಿಗಮ ವಿಜಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಧ್ಯಾಹ್ನದ ಬಳಿಕ ಚಾಮರಾಜಪೇಟೆಯ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
1980ರಲ್ಲಿ ಗೀತಪ್ರಿಯಾ ನಿರ್ದೇಶನದ ‘ಬೆಳವಳದ ಮಡಿಲಲ್ಲಿ’ ಚಿತ್ರದಲ್ಲಿ ಸಣ್ಣ ಪಾತ್ರದಲ್ಲಿ ನಟಿಸುವ ಮೂಲಕ ನಟನಾಗಿ ಗುರುತಿಸಿಕೊಂಡರು. ನಟ ಸರಿಗಮ ವಿಜಯ್ ಅವರು 269 ಚಿತ್ರಗಳಲ್ಲಿ ನಟಿಸಿದ್ದಾರೆ. 80 ಚಿತ್ರಗಳಿಗೆ ಸಹಾಯಕ ನಿರ್ದೇಶನ ಮಾಡಿದ್ದಾರೆ. ಹಾಗಾಗಿ ಅವರ ಹೆಸರಿನ ಜೊತೆ ಸರಿಗಮ ಎನ್ನುವುದು ಸೇರಿಕೊಂಡಿತ್ತು. ಈ ನಾಟಕ ಸಾವಿರಕ್ಕೂ ಅಧಿಕ ಪ್ರದರ್ಶನ ಕಂಡಿದೆ.



