ಬಳ್ಳಾರಿ: ಜಿಲ್ಲೆಯ ತೋರಣಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನ ಪುಸುಲಾಯಿಸಿ ಕರೆದೊಯ್ದು ದುಷ್ಕರ್ಮಿಯಿಂದ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಲಾಗಿತ್ತು.
ಇನ್ನೂ ಫೋಕ್ಸೋ ಪ್ರಕರಣ ಎದುರಿಸುತ್ತಿರುವ ಮಂಜುನಾಥ್ (26) ಮೇಲೆ ಇಂದು ಬೆಳಗ್ಗೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ. ಆರೋಪಿ ತಪ್ಪಿಸಲು ಯತ್ನಿಸಿದ್ದರಿಂದ ಪೊಲೀಸರು ಗುಂಡಿನ ದಾಳಿ ನಡೆಸಬೇಕಾಯಿತು ಎನ್ನಲಾಗಿದೆ.
ಸೋಮವಾರ ನಡೆದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆಗೆ ಪೊಲೀಸರು ಮೂರು ತಂಡ ರಚಿಸಿದ್ದರು. ಕೊಪ್ಪಳದ ಹುಲಗಿಯಲ್ಲಿ ಆರೋಪಿಯನ್ನು ಬಂಧಿಸಲಾಗಿತ್ತು.
ಬಂಧನದ ಬಳಿಕ ಪಂಚಾನಾಮೆಗೆ ಹೋದಾಗ ಆತ, ಹೆಡ್ ಕಾನ್ಸ್ಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಹೀಗಾಗಿ ಆತನ ಮೇಲೆ ಗುಂಡಿನ ದಾಳಿ ನಡೆಸಲಾಯಿತು. ಪಿಎಸ್ಐ ಡಾಕೇಶ್ ಆರೋಪಿಯ ಬಲಗಾಲಿಗೆ ಮೇಲೆ ಪೈರಿಂಗ್ ಮಾಡಿದ್ದರು. ಸದ್ಯ ಆರೋಪಿಯನ್ನು ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.



