HomeUncategorizedಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿ:ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ 

ಪರೀಕ್ಷೆಗಳನ್ನು ವ್ಯವಸ್ಥಿತವಾಗಿ ನಡೆಸಿ:ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಸೂಚನೆ 

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗವು ವಿವಿಧ ಇಲಾಖೆಗಳ ಗ್ರೂಪ್ `ಬಿ’ ವೃಂದದ ಹುದ್ದೆಗಳಿಗೆ ಜ.19 ಮತ್ತು 25ರಂದು ಪರೀಕ್ಷೆಗಳನ್ನು ನಡೆಸುತ್ತಿದೆ. ಜಿಲ್ಲೆಯಲ್ಲಿ ಪರೀಕ್ಷೆಗಳು ಸುವ್ಯವಸ್ಥಿತವಾಗಿ ಹಾಗೂ ಪಾರದರ್ಶಕವಾಗಿ ಜರುಗಿಸಬೇಕು ಹಾಗೂ ಪರೀಕ್ಷಾ ಅಕ್ರಮಕ್ಕೆ ಅವಕಾಶ ಇಲ್ಲ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ನಿರ್ದೇಶನ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ಪರೀಕ್ಷಾ ಕೇಂದ್ರಗಳಿಗೆ ವೀಕ್ಷಕರನ್ನು, ಸ್ಥಳೀಯ ನಿರೀಕ್ಷಣಾಧಿಕಾರಿಯನ್ನು, ಮಾರ್ಗಾಧಿಕಾರಿಗಳನ್ನು ಮತ್ತು ತ್ರಿಸದಸ್ಯ ಸಮಿತಿಯನ್ನು ನೇಮಿಸಲಾಗಿದೆ. ಅಧಿಕಾರಿಗಳು ತಮಗೆ ನಿಗದಿಪಡಿಸಿದ ಕರ್ತವ್ಯಗಳನ್ನು ನಿರ್ವಹಿಸಬೇಕು. ವಿಕಲಚೇತನರಿಗೆ ನೆಲಮಹಡಿಯ ಪರೀಕ್ಷಾ ಕೇಂದ್ರಗಳಲ್ಲಿಯೇ ಪರೀಕ್ಷೆ ಬರೆಯುವ ವ್ಯವಸ್ಥೆಯಾಗಬೇಕು. ಒಟ್ಟಾರೆ ಯಾವುದೇ ಅಕ್ರಮ, ಲೋಪದೋಷಗಳಿಗೆ ಆಸ್ಪದವಿಲ್ಲದಂತೆ ಪರೀಕ್ಷೆಯನ್ನು ಯಶಸ್ವಿಯಾಗಿ ಜರುಗಿಸಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಪರೀಕ್ಷಾ ಕೇಂದ್ರದ ಸುತ್ತಲೂ 200 ಮೀಟರ್ ಪರಿಮಿತಿಯೊಳಗೆ ಜ. 19ರಂದು ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಾಗೂ ಜ. 25ರಂದು ಮಧ್ಯಾಹ್ನ 1 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ.

ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು, ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ಹಾಗೂ ಅನಧಿಕೃತ ವ್ಯಕ್ತಿಗಳಿಗೆ ಪರೀಕ್ಷಾ ಕೇಂದ್ರಗಳ ಪ್ರವೇಶವನ್ನು ನಿರ್ಬಂಧಿಸಿದೆ. ಈ ಪ್ರದೇಶದ ಝರಾಕ್ಸ್ ಅಂಗಡಿ, ಸೈಬರ್ ಸೆಂಟರ್, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದು ಮಾಡಲು ಆದೇಶಿಸಿದೆ. ಗುರುತು ಪತ್ತೆ ಹಚ್ಚಲು ಸಾಧ್ಯವಾಗದ ರೀತಿಯಲ್ಲಿ ವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಪ್ರಿಸ್ಕಿಂಗ್ ನಡೆಸುವ ಸಿಬ್ಬಂದಿಯೊAದಿಗೆ ಮತ್ತು ಪರೀಕ್ರಾ ಕೊಠಡಿಯ ಸಂವೀಕ್ಷಕರೊಂದಿಗೆ ಸಹಕರಿಸಿ ತಪಾಸಣೆಗೊಳಗಾಗುವುದು ಕಡ್ಡಾಯವಾಗಿರುತ್ತದೆ.

ಶೂ-ಸಾಕ್ಸ್ಗಳನ್ನು ಧರಿಸಲು ಅವಕಾಶವಿರುವುದಿಲ್ಲ. ಸಾಧಾರಣ ಚಪ್ಪಲಿಯನ್ನು ಧರಿಸಿ ಪರೀಕ್ಷೆಗೆ ಹಾಜರಾಗಬೇಕು. ಅಭ್ಯರ್ಥಿಗಳು ಪರೀಕ್ಷಾ ಕೊಠಡಿಯೊಳಗೆ ಯಾವುದೇ ಆಧುನಿಕ ಉಪಕರಣಗಳು, ಮೊಬೈಲ್ ಬ್ಲೂಟೂತ್, ಕ್ಯಾಲ್ಕುಲೇಟರ್, ವೈಟ್‌ಫ್ಲುಡ್, ವೈರ್‌ಲೆಸ್ ಸೆಟ್ಸ್, ಪೇಪರ್, ಬುಕ್ಸ್ಗಳನ್ನು ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ತುಂಬು ತೋಳಿನ ಶರ್ಟ್ ಮತ್ತು ಯಾವುದೇ ಆಭರಣಗಳನ್ನು ಮೆಟಲ್ ಮತ್ತು ನಾನ್‌ಮೆಟಲ್ (ಮಂಗಳಸೂತ್ರ ಹಾಗೂ ಕಾಲುಂಗುರಗಳನ್ನು ಹೊರತುಪಡಿಸಿ)ಪುಲ್ಲೋವರ್ಸ, ಜಾಕೆಟ್, ಸ್ವೆಟರ್‌ಗಳನ್ನು ಧರಿಸಿ ಹಾಜರಾಗುವುದನ್ನು ನಿಷೇಧಿಸಲಾಗಿದೆ.

ಹಿಯರಿಂಗ್ ಆ್ಯಡ್ ಉಪಕರಣ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳೊಂದಿಗೆ ಪರೀಕ್ಷೆ ಆರಂಭವಾಗುವ ಎರಡು ಗಂಟೆ ಮುಂಚಿತವಾಗಿ ಸಂಪೂರ್ಣ ವಿಶೇಷ ತಪಾಸಣೆಗೆ ಒಳಪಡುವುದು ಕಡ್ಡಾಯವಾಗಿದೆ. ಪ್ರವೇಶ ಪತ್ರದಲ್ಲಿ ತಿಳಿಸಿರುವ ವಸ್ತ್ರ ಸಂಹಿತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮೆಟಲ್ ವಾಟರ್ ಬಾಟಲ್ ಮತ್ತು ನಾನ್ ಟ್ರಾನ್ಸಪರಂಟ್ ವಾಟರ್ ಬಾಟಲ್‌ಗಳನ್ನು ಪರೀಕ್ಷಾ ಕೊಠಡಿಯೊಳಗೆ ತೆಗೆದುಕೊಂಡು ಹೋಗುವುದನ್ನು ನಿಷೇದಿಸಲಾಗಿದೆ. ಕರ್ನಾಟಕ ಲೋಕಸೇವಾ ಆಯೋಗವು ನಿಗದಿಪಡಿಸಿರುವ ಸೂಚನೆಗಳನ್ನು ಪರೀಕ್ಷಾ ಕೇಂದ್ರದಲ್ಲಿ ಕಡ್ಡಾಯವಾಗಿ ಪಾಲಿಸಬೇಕು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಬಿ. ಸಂಕದ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಶಾಂತಿ-ಸುವ್ಯವಸ್ಥೆ, ಪಾರದರ್ಶಕತೆ ಕಾಪಾಡಲು ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಸೇರಿದಂತೆ ಅವಶ್ಯಕ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರಡಿ, ಡಯಟ್ ಪ್ರಾಚಾರ್ಯರಾದ ಜಿ.ಎಲ್. ಬಾರಾಟಕ್ಕೆ, ಖಜಾನೆ ಇಲಾಖೆ ಉಪನಿರ್ದೇಶಕ ಹರಿನಾಥ ಬಾಬು, ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಜಿಲ್ಲೆಯ 9 ಪರೀಕ್ಷಾ ಕೇಂದ್ರಗಳ ವಿವರ

ನಗರದ ಕೆ.ಎಲ್.ಇ ಸೊಸೈಟಿಸ್ ಜೆ.ಟಿ. ಕಾಲೇಜ್, ಸಿ.ಎಸ್. ಪಾಟೀಲ ಬಾಲಕರ ಪ್ರೌಢಶಾಲೆ, ಸಿ.ಎಸ್. ಪಾಟೀಲ ಬಾಲಕಿಯರ ಪ್ರೌಢಶಾಲೆ, ವಿ.ಡಿ.ಎಸ್.ಟಿ. ಗಂಡುಮಕ್ಕಳ ಪ್ರೌಢಶಾಲೆ, ವಿ.ಡಿ.ಎಸ್.ಟಿ. ಹೆಣ್ಣುಮಕ್ಕಳ ಸಂಯುಕ್ತ ಪಿ.ಯು. ಕಾಲೇಜ್, ಬೆಟಗೇರಿಯ ಎ.ಎಸ್.ಎಸ್ ಕಾಮರ್ಸ್ ಕಾಲೇಜ್, ನಗರದ ಶಾಸ್ತಿçÃಜಿ ಹೈಸ್ಕೂಲ್, ಮುಳಗುಂದ ರಸ್ತೆಯಲ್ಲಿನ ಸರಕಾರಿ ಪದವಿಪೂರ್ವ ಕಾಲೇಜ್, ಸಿದ್ದಲಿಂಗನಗರದ ಬಸವೇಶ್ವರ ಪ್ರೌಢಶಾಲೆಗಳು ಪರೀಕ್ಷಾ ಕೇಂದ್ರಗಳಾಗಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!