ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದು ಎಸ್ಕೇಪ್ ಆಗಿದ್ದ ಆರೋಪಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. ಘಟನೆ ನಡೆದ 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಆರೋಪಿಯನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.
ಗುರುವಾರ ಮುಂಜಾನೆ 2.30ರ ಸುಮಾರಿಗೆ ದಾಳಿ ಕೋರ ಸೈಫ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಆರು ಕಡೆಗಳಲ್ಲಿ ಹಲ್ಲೆ ನಡೆಸಲಾಗಿದ್ದು ಎರಡು ತೀವ್ರ ಗಾಯವಾಗಿದೆ. ಸದ್ಯ ಮುಂಬೈನ ಲೀಲಾವತಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿರುವ ಸೈಫ್ ಸುಧಾರಿಸಿಕೊಳ್ಳುತ್ತಿದ್ದಾರೆ.
ದಾಳಿ ನಡೆಸಿ ಮನೆಯಿಂದ ಪಾರಾರಿಯಾಗುವ ವೇಳೆ ಆರೋಪಿಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ಅದನ್ನು ಮುಂಬೈ ಪೊಲೀಸರು ಬಿಡುಗಡೆ ಮಾಡಿದ್ದರು. ಅಲ್ಲದೆ ದಾಳಿ ನಡೆದ ಬೆನ್ನಲ್ಲೇ ದಾಳಿಕೋರನ ಹುಡುಕಲು ಮುಂಬೈ ಪೋಲಿಸರು 20 ತಂಡ ರಚಿಸಿ ಬಲೆ ಬೀಸಿದ್ದರು. ಕೊನೆಗೂ ದಾಳಿಕೋರ ಪೋಲೀಸರ ಅತಿಥಿಯಾಗಿದ್ದಾನೆ. ಇದು ದರೋಡೆ ಮಾಡಲು ಈ ಕೃತ್ಯ ಎಸಗಿದ್ದ ಅಥವಾ ಕೊಲೆ ಮಾಡುವ ಹಿನ್ನಾರ ಇತ್ತಾ? ಎಂಬುದನ್ನು ತಿಳಿಯಲು ವಿವಿಧ ರೀತಿಯಲ್ಲಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಬಂಧಿತನಾಗಿರುವ ಆರೋಪಿ ಈ ಹಿಂದೆ ಶಾರುಖ್ ಖಾನ್ ಮನೆ ಮುಂದೆ ಕೂಡ ಕಾಣಿಸಿಕೊಂಡಿರೋದು ಕೂಡ ಬೆಳಕಿಗೆ ಬಂದಿದೆ.